

PM; ಪೇಸ್‌ಮೇಕರ್ ಕಸಿ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ(ಅ.2) ದೂರವಾಣಿ ಮೂಲಕ ಮಾತನಾಡಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಸಾಮಾಜಿಕ ವೇದಿಕೆಯಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ,"ಖರ್ಗೆ ಅವರ ಜೊತೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು 'ಎಕ್ಸ್' ನಲ್ಲಿ ಬರೆದಿದ್ದಾರೆ.
ಖರ್ಗೆ ಅವರನ್ನು ಬುಧವಾರ (ಅಕ್ಟೋಬರ್ 1) ಬೆಳಿಗ್ಗೆ ವೈದ್ಯಕೀಯ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರಿಗೆ ಪೇಸ್‌ಮೇಕರ್ ಕಸಿ ಮಾಡಲಾಯಿತು. ವೈದ್ಯಕೀಯ ಪ್ರಕ್ರಿಯೆಯ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಥಿರವಾಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ದೃಢಪಡಿಸಿದರು.(ಏಜೆನ್ಸೀಸ್)