ಪಿಎಂ ಕೇರ್ಸ್​ ಹಣ ಎಲ್ಲಿ ಹೋಯಿತು? ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಪ್ರಶ್ನೆ

mamtha
Published on

ಕೋಲ್ಕತ: ಸದಾ ಒಂದಿಲ್ಲೊಂದು ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸುತ್ತಲೇ ಬಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ ಮತ್ತೊಮ್ಮೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕರೊನಾ ಸಮಯದಲ್ಲಿ ಕೇಂದ್ರ ಸರ್ಕಾರ ಸಂಗ್ರಹಿಸಿದ ಪಿಎಂ ಕೇರ್ಸ್​ ಹಣ ಎಲ್ಲಿ ಹೋಯಿತು ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರವು ದೇಶದ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಅದಕ್ಕೆಂದು ಕೇಂದ್ರದ ತನಿಖಾ ಸಂಸ್ಥೆಗಳನ್ನೂ ಬಳಸಿಕೊಳ್ಳುತ್ತಿದೆ. ಪಿಎಂ ಕೇರ್ಸ್​ನಲ್ಲಿ ಸಂಗ್ರಹವಾದ ಲಕ್ಷ ಕೋಟಿ ರೂಪಾಯಿ ಎಲ್ಲಿ ಹೋಯಿತು? ಇದರ ಬಗ್ಗೆ ಯಾರಿಗಾದರೂ ಮಾಹಿತಿ ಇದೆಯೇ? ಪಿಎಂ ಕೇರ್ಸ್​ ಬಗ್ಗೆ ಆಡಿಟ್​ ಏಕೆ ಮಾಡಿಲ್ಲ ಎಂದು ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಕರೊನಾ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಏನು ಕೊಡುಗೆ ನೀಡಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಮತಾ ಬ್ಯಾನರ್ಜಿ ಅವರ ಟಿಎಂಸಿ ಮತ್ತು ಬಿಜೆಪಿ ಪಕ್ಷಗಳು ಭರ್ಜರಿ ಪ್ರಚಾರವನ್ನು ಆರಂಭಿಸಿವೆ. ಅದೇ ಹಿನ್ನೆಲೆಯಲ್ಲಿ ಪರಸ್ಪರ ದೂರು, ಆರೋಪಗಳನ್ನು ಮಾಡಿಕೊಳ್ಳಲಾರಂಭಿಸಿವೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net