ಮಮತಾ ಬ್ಯಾನರ್ಜಿ ಕುಟುಂಬವನ್ನೂ ಬಿಡದ ಕರೊನಾ! ದೀದಿ ತಮ್ಮ ಕರೊನಾಗೆ ಬಲಿ

mamatha
Published on

ಕೋಲ್ಕತ: ದೇಶಾದ್ಯಂತ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣುತ್ತಿದ್ದು, ಸಾವಿರಾರು ಮಂದಿ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುಟುಂಬಕ್ಕೂ ಕರೊನಾ ಅಲೆ ತಟ್ಟಿದ್ದು, ಅವರ ತಮ್ಮ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.


ಮಮತಾ ಬ್ಯಾನರ್ಜಿ ಅವರ ತಮ್ಮ ಆಶಿಮ್​ ಬ್ಯಾನರ್ಜಿ (60) ಅವರಿಗೆ ಕರೊನಾ ಸೋಂಕು ದೃಢವಾಗಿದ್ದು, ಕೆಲ ದಿನಗಳಿಂದ ಅವರಿಗೆ ಕೋಲ್ಕತದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಅವರು ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.


ಕರೊನಾ ನಿಯಮಾವಳಿಗಳ ಅನುಸಾರ ಅಂತ್ಯಕ್ರಿಯೆಯನ್ನು ಇಂದು ಮಾಡಲಾಗುವುದು ಎಂದು ತಿಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಳವಾಗುತ್ತಿದೆ. ಶುಕ್ರವಾರ ಒಂದೇ ದಿನದಲ್ಲಿ 20,800ಕ್ಕೂ ಅಧಿಕ ಪ್ರಕರಣಗಳು ದೃಢವಾಗಿವೆ. ಅದೇ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 15 ದಿನಗಳ ಕಾಲ ಲಾಕ್​ಡೌನ್​ ವಿಸ್ತರಣೆ ಮಾಡಲಾಗಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net