ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಪೈಪ್​​ನಿಂದ ಹಲ್ಲೆ; ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು

man thrashed
Published on

ಉತ್ತರಪ್ರದೇಶ: ವ್ಯಕ್ತಿಯೊಬ್ಬ ಕಳ್ಳತನ ಮಾಡಲು ಬಂದಿದ್ದ ಎಂದು ಆರೋಪಿಸಿದ ಗ್ಯಾಂಗ್​​​, ಆತನನ್ನು ವಿವಸ್ತ್ರಗೊಳಿಸಿ ಪೈಪನಿಂದ ಮನಬಂದಂತೆ ಥಳಿಸಿರುವ ಘಟನೆ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ಸಂಭವಿಸಿದ್ದು, ಸದ್ಯ ಆರೋಪಿಗಳ ವಿರುದ್ಧ ಮೋತಿನಗರ ಪೊಲೀಸರು ಎಫ್​​ಐಆರ್​​ ದಾಖಲಿಸಿದ್ದಾರೆ.

ಘಟನೆಯ ವಿವರ: ಕಳ್ಳತನ ಮಾಡಲು ಬಂದಿದ್ದ ಎಂದು ಆರೋಪಿಸಿದ ಗ್ಯಾಂಗ್​​, ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಆತನ ಮೇಲೆ ಪೈಪ್​​ನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಈ ಘಟನೆಯ ದೃಶ್ಯವನ್ನು ಸ್ಥಳೀಯರು ಚಿತ್ರಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ಆಧರಿಸಿದ ಮೋತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ವಿಡಿಯೋವನ್ನು ಯಾವಾಗ ಚಿತ್ರೀಕರಿಸಲಾಗಿದೆ, ಘಟನೆಗೆ ಕಾರಣವೇನು ಮತ್ತು ವಿಡಿಯೋದಲ್ಲಿ ಕಾಣುತ್ತಿರುವ ಆರೋಪಿಗಳು ಯಾರು ಎಂಬುದನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​​ ಅಧಿಕಾರಿಗಳು ಹೇಳಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net