ಶಿವಾಜಿ ಪ್ರತಿಮೆ ಬಳಿ ಮೂತ್ರ ವಿಸರ್ಜನೆ ಆರೋಪ: ಗುಂಪು ಘರ್ಷಣೆಯಿಂದ ಉದ್ವಿಗ್ನ ಸ್ಥಿತಿ ನಿರ್ಮಾಣ

shivaji statue
Published on

ಗಜ್ವೇಲ್​: ಶಿವಾಜಿ ಪ್ರತಿಮೆ ಬಳಿ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ನಂತರ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿರುವ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಗಜ್ವೆಲ್ ಪಟ್ಟಣದಲ್ಲಿ ನಡೆದಿದೆ.

ಇದನ್ನೂ ಓದಿ: ಮುನ್ನೆಚ್ಚರಿಕೆ ವಹಿಸಿ ಡೆಂಘೆಯಿಂದ ದೂರವಿರಿ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಸಲಹೆ

ಗಜ್ವೆಲ್, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಪ್ರತಿನಿಧಿಸುವ ಕ್ಷೇತ್ರವಾಗಿದ್ದು, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ. ಸುದ್ದಿ ತಿಳಿದ ಹಲವರು ಆತನ ಮೇಲೆ ಹಲ್ಲೆ ನಡೆಸಿ ಆತನನ್ನು ಸಮೀಪದ ಪೊಲೀಸ್​ ಠಾಣೆಗೆ ಒಪ್ಪಿಸಿ ಹಿಂದಿರುಗುತ್ತಿದ್ದರು. ಈ ವೇಳೆ ಮತ್ತೊಂದು ಗುಂಪು ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿದೆ ಎಂದು ಆರೋಪಿಸಿ ಇವರ ಜತೆ ವಾಗ್ವಾದಕ್ಕಿಳಿದಿದ್ದಾರೆ.

ಈ ವಾಗ್ವಾದವು ಗುಂಪುಗಳ ನಡುವಿನ ಘರ್ಷಣೆಯಾಗಿ ಉಲ್ಬಣಗೊಂಡು, ಇದರ ಪರಿಣಾಮವಾಗಿ ಒಬ್ಬ ವ್ಯಕ್ತಿಗೆ ಗಾಯಗಳಾಗಿವೆ. ಇದಕ್ಕೆ ಪ್ರತಿಯಾಗಿ ಹಲವಾರು ಸಂಘಟನೆಗಳು ಸಂತ್ರಸ್ತೆಗೆ ನ್ಯಾಯ ಮತ್ತು ತಪ್ಪಿತಸ್ಥರನ್ನು ಶಿಕ್ಷಿಸುವಂತೆ ಒತ್ತಾಯಿಸಿ ಗಜ್ವೇಲ್‌ನಲ್ಲಿ ಬಂದ್‌ಗೆ ಕರೆ ನೀಡಿದ್ದವು.

ಇದನ್ನೂ ಓದಿ: ಕ್ಷೇತ್ರದ ಜನರ ಕಷ್ಟಕ್ಕೆ ಸ್ಪಂದಿಸುವೆ: ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಹೇಳಿಕೆ

ಕೊನೆಗೆ ಪೊಲೀಸರು ಮಧ್ಯ ಪ್ರವೇಶಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net