

ಹಟ್ಟಿಚಿನ್ನದಗಣಿ: ಪಟ್ಟಣದ ಕಾಲನಿಯೊಂದರಲ್ಲಿ ಶನಿವಾರ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದವನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ಚಂದ್ರಶೇಖರ ಬಂಧಿತ. ಐದನೇ ತರಗತಿ ವಿದ್ಯಾರ್ಥಿಯನ್ನು ಶಾಲೆಯಿಂದ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಿಕೊಂಡಿದ್ದರಿಂದ ಸ್ಥಳೀಯರು ದೌಡಾಯಿಸಿ ಹಿಡಿದು ಕೂಡಿ ಹಾಕಿದ್ದಾರೆ.
ಪೊಲೀಸರು ಬರುತ್ತಿದ್ದಂತೆ ಆರೋಪಿ ಓಡಿ ಹೋಗಲು ಯತ್ನಿಸಿದ್ದು, ಪೇದೆ ಬಸವಾರಜ್ ಹಾಲಾಪುರ್ ಹಿಡಿದು ಹಟ್ಟಿ ಠಾಣೆಗೆ ಕರೆದೊಯ್ದಿದ್ದಾರೆ. ಸ್ಥಳಕ್ಕೆ ಎಸ್ಪಿ ಎಸ್.ಪುಟ್ಟಮಾದಯ್ಯ, ಡಿವೈಎಸ್ಪಿ ದತ್ತಾತ್ರೆಯ ಕಾರ್ನಡ್, ಸಿಪಿಐ ಕೆ.ಹೊಸಕೆರಪ್ಪ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.