ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​, ಬುರ್ಖಾ ಧರಿಸಿ ಪ್ರವೇಶಿಸಿದ್ದ ಟೆಕ್ಕಿ

mfff
Published on

ಮಹಿಳೆಯರ ಶೌಚಾಲಯದಲ್ಲಿ ಟೆಕ್ಕಿಯೊಬ್ಬ ಬುರ್ಖಾ ಧರಿಸಿ ಶೌಚಾಲಯಕ್ಕೆ ಪ್ರವೇಶಿಸಿರೋದು ಮಾತ್ರವಲ್ಲ ಅಲ್ಲಿ ವಿಡಿಯೋ ರೆಕಾರ್ಡ್​​ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೇರಳದ ಕೊಚ್ಚಿಯಲ್ಲಿರುವ ಲುಲುಮಾಲ್​​ನಲ್ಲಿನ ಮಹಿಳೆಯರ ಶೌಚಾಲಯಕ್ಕೆ ಬುರ್ಖಾ ಧರಿಸಿ ಶೌಚಾಲಯಕ್ಕೆ ಪ್ರವೇಸಿ ಕೃತ್ಯ ಎಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.


ಕೊಚ್ಚಿಯಲ್ಲಿರುವ ಲುಲುಮಾಲ್​​ನಲ್ಲಿ ಘಟನೆ ನಡೆದಿದ್ದು, ಐಟಿ ಉದ್ಯೋಗಿ ಅಭಿಮನ್ಯು(23) ಈ ಕೃತ್ಯ ಎಸಗಿದ್ದಾನೆ. ಆತ ಬಿಟೆಕ್ ಪದವೀಧರನಾಗಿರುವ ಆರೋಪಿ ಐಟಿ ಕಂಪನಿಯ ಉದ್ಯೋಗಿಯಾಗಿದ್ದಾನೆ. ಮಹಿಳೆಯ ಸೋಗಿನಲ್ಲಿ ಬುರ್ಖಾ ಧರಿಸಿ ಲುಲುಮಾಲ್​ಗೆ ಬಂದಿದ್ದ, ಈ ವೇಳೆ ಮಹಿಳೆಯರ ಶೌಚಾಯಲಕ್ಕೆ ತೆರಳಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ.


ಶೌಚಾಲಯದಲ್ಲಿ ಮೊಬೈಲ್ ಇಟ್ಟು ಹೊರಬಂದು ನಿಂತಿದ್ದ ವ್ಯಕ್ತಿಯನ್ನ ಕಂಡು, ಸಿಬ್ಬಂದಿಗೆ ಅನುಮಾನ ಬಂದು ಮಾಲ್​ನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೊಚ್ಚಿ ಪೊಲೀಸರು ಅಭಿಮನ್ಯುವನ್ನು ಬಂಧಿಸಿದ್ದಾರೆ.


ಪ್ರಕರಣ ದಾಖಲಾಗುತ್ತಿದ್ದಂತೆಯೇ ಪೊಲೀಸರು ತನಿಖೆ ನಡೆಸಿದ ಪೊಲೀಸರ ಪ್ರಕಾರ, ಕೊಚ್ಚಿಯ ಪ್ರಸಿದ್ಧ ಮಾಲ್‌ನಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಕೊಚ್ಚಿಯಲ್ಲಿ ಕೆಲಸ ಮಾಡುವ ರೊಬೊಟಿಕ್ಸ್ ಎಂಜಿನಿಯರಿಂಗ್ ಪದವೀಧರ ಅಭಿಮನ್ಯು ಮಹಿಳೆಯಂತೆ ಪೋಸ್ ನೀಡಲು ಬುರ್ಖಾ (ಮುಸುಕು) ಧರಿಸಿ ಮಹಿಳೆಯರ ವಾಶ್‌ರೂಮ್‌ನಲ್ಲಿ ವೀಡಿಯೊಗಳನ್ನು ಚಿತ್ರೀಕರಿಸುವಾಗ ಸಿಕ್ಕಿಬಿದ್ದಿದ್ದಾನೆ. ಸ್ಥಳೀಯ ನ್ಯಾಯಾಲಯದಿಂದ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


ಈ ವ್ಯಕ್ತಿ ಈ ಹಿಂದೆಯೂ ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ ಅದನ್ನು ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸದ್ಯ ಪೊಲೀಸರು ಅಭಿಮನ್ಯು ಅವರ ಫೋನ್ ಮತ್ತು ಅಪರಾಧ ಮಾಡಲು ಬಳಸಿದ ಬುರ್ಖಾವನ್ನು ವಶಪಡಿಸಿಕೊಂಡಿದ್ದಾರೆ.


ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ರೆಕಾರ್ಡ್ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ವಿದ್ಯಾರ್ಥಿನಿಯರು ತಮಾಷೆಗೆಂದು ವಿಡಿಯೋ ಮಾಡಿ ನಂತರ ಡಿಲೀಟ್ ಮಾಡಿದ್ದಾರೆ ಎಂದು ಹೇಳಲಾಗಿತ್ತು.

ಇದಲ್ಲದೆ ಕರ್ನಾಟಕದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ ಎಂದು ಘೋಷಿಸಿದ ಬಳಿಕ ವ್ಯಕ್ತಿಯೊಬ್ಬರು ಬುರ್ಖಾ ಧರಿಸಿ ಬಸ್​ನಲ್ಲಿ ಪ್ರಯಾಣಿಸಿ ಸಿಕ್ಕಿಬಿದ್ದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net