

ನಂಜನಗೂಡು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಂಜನಗೂಡು ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಟ್ಟಣದ ನಿವಾಸಿ ಮೊಹಮ್ಮದ್ ಮಸೂದ್ (30) ಬಂಧಿತ. ಪಟ್ಟಣದ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ನಂಜನಗೂಡು ಪಟ್ಟಣ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸಿ.ಎಂ.ರವೀಂದ್ರ, ಪಿಎಸ್‌ಐ ಕೃಷ್ಣ ಕಾಂತಕೋಳಿ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ.
ಈ ವೇಳೆ ಬೈಕ್‌ನಲ್ಲಿ ಬರುತ್ತಿದ್ದ ಮಸೂದ್‌ನನ್ನು ಬಂಧಿಸಿ 29 ಪೊಟ್ಟಣಗಳಲ್ಲಿ ಇದ್ದ ಒಟ್ಟು 540 ಗ್ರಾಂ ಗಾಂಜಾ, 550 ರೂ. ನಗದು,ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೈಸೂರು ಜಿಲ್ಲೆ ಎಸ್ಪಿ ವಿಷ್ಣುವರ್ಧನ್, ಎಎಸ್ಪಿ ಮಲ್ಲಿಕ್, ನಾಗೇಶ್, ಡಿವೈಎಸ್ಪಿ ರಘು ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ತಿಮ್ಮಯ್ಯ, ಯು.ಎಸ್.ಶಿವಕುಮಾರ್, ಚೇತನ್‌ಕುಮಾರ್, ಮಹೇಶ್, ನವೀನ್‌ಕುಮಾರ್, ಮುರುಳೀಧರ, ಮಹೇಶ್ ಜಗತಾಪ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ನಂಜನಗೂಡು ಪಟ್ಟಣ ಪೊಲೀಸ್ ಠಾಣೆ ಪೊಲೀಸರ ಕಾರ್ಯಕ್ಕೆ ಎಸ್ಪಿ ವಿಷ್ಣುವರ್ಧನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.