ಗಣರಾಜ್ಯೋತ್ಸವ ಪರೇಡ್​ ವೇಳೆ ಭದ್ರತಾ ಲೋಪ; ಸಿಎಂ ಬಳಿ ಏಕಾಏಕಿ ನುಗ್ಗಲು ಯತ್ನಿಸಿದ ವ್ಯಕ್ತಿ

Security Breach
Published on

ಬೆಂಗಳೂರು: 75ನೇ ಗಣರಾಜ್ಯೋತ್ಸವದ ಪ್ರಯುಕ್ತ ನಗರದ ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ  ಪರೇಡ್ ನಡೆಯುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನುಗ್ಗಲ್ಲು ಯತ್ನಿಸಿರುವ ಘಟನೆ ನಡೆದಿದೆ.

ಮೈಸೂರು ಮೂಲದ ಪರಶುರಾಮ್​ ಎಂಬ ವ್ಯಕ್ತಿಯೂ ಕೈಯಲ್ಲಿ ಕರಪತ್ರ ಹಿಡಿದು ಮುಖ್ಯಮಂತ್ರಿ ಬಳಿ ನುಗ್ಗಲು ಯತ್ನಿಸಿದ್ದು, ಪೊಲೀಸರು ಆತನನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ.

ಕೆಪಿಎಸ್​ಸಿ ಆರ್ಡರ್ ವಿಳಂಬದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗಲು ಪೊಲೀಸರು ಬಿಡದಿದ್ದಾಗ ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ನುಗ್ಗಲು ಯತ್ನಿಸಿದ್ದಾರೆ.

ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ ಪರಶುರಾಮ್​ ಅವರನ್ನು ಪೊಲೀಸರು ಕೂಡಲೇ ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಭದ್ರತಾ ಲೋಪದ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net