ಸ್ನೇಹಿತರ ಮಧ್ಯೆ ದ್ವೇಷ: ಕಟ್ಟಿಗೆಯಿಂದ ತಲೆಗೆ ಹೊಡೆದು ಭೀಕರವಾಗಿ ಕೊಂದ!

Prashanth Rakesh
ಪ್ರಶಾಂತ್, ರಾಕೇಶ್​
Published on

ದಾವಣಗೆರೆ: ವ್ಯಕ್ತಿಯೊಬ್ಬನ ತಲೆಗೆ ಕಟ್ಟಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡುವ ಮೂಲಕ ಹಳೇ ದ್ವೇಷದ ಪ್ರಕರಣ ಕೊಲೆಯವರೆಗೂ ಹೋದಂತಾಗಿದೆ. ದಾವಣಗೆರೆಯಲ್ಲಿ ಇಂಥದ್ದೊಂದು ಭೀಕರ ಹತ್ಯೆ ನಡೆದಿದೆ.

ಪ್ರಶಾಂತ (29) ಭೀಕರವಾಗಿ ಕೊಲೆಯಾದ ವ್ಯಕ್ತಿ. ದಾವಣಗೆರೆಯ ನಗರದ ಕಬ್ಬೂರು ಬಸಪ್ಪ ನಗರದಲ್ಲಿ ಈ ಘಟನೆ ನಡೆದಿದೆ. ರಾಕೇಶ್ ಎಂಬಾತನೇ ಕೊಲೆ ಆರೋಪಿ. ಕಬ್ಬೂರು ಬಸಪ್ಪ ನಗರದ ಎಲವಟ್ಟಿ ರೈಸ್ ಮಿಲ್ ಬಳಿ ಕೊಲೆ ಮಾಡಿದ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.

ಆರೋಪಿ ರಾಕೇಶ್ ಮತ್ತು ಪ್ರಶಾಂತ್ ಸ್ನೇಹಿತರು. ಆದರೆ ಕೆಲವು ದಿನಗಳಿಂದ ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆಯುತ್ತಿತ್ತು. ಇಬ್ಬರ ಮಧ್ಯೆ ರಾಜಿ ಮಾಡಿಸಿದ್ದರೂ ದ್ವೇಷ ಮುಂದುವರಿದಿತ್ತು. ಅದೇ ಹಳೇ ದ್ವೇಷದಿಂದಾಗಿ ರಾಕೇಶ್ ತನ್ನ ಪ್ರಶಾಂತ್​ನ ತಲೆಗೆ ಕಟ್ಟಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಹೊಡೆತದ ತೀವ್ರತೆಗೆ ಪ್ರಶಾಂತ್​ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಘಟನಾ ಸ್ಥಳಕ್ಕೆ ನಗರ ಡಿವೈಎಸ್​ಪಿ ಮಲ್ಲೇಶ್ ದೊಡ್ಡಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರ್​ಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net