ಮಗುವನ್ನು ಹೊತ್ತು ಕೆಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ!; ಸ್ಥಳೀಯರಿಂದ ರಕ್ಷಣೆ

Untitled design - 2023-07-31T154510.270
Published on

ತಮಿಳುನಾಡು: ತಮಿಳುನಾಡಿನ ಹಳ್ಳಿಯೊಂದರಲ್ಲಿ ತನ್ನ 1 ವರ್ಷದ ಮಗುವನ್ನು ಹೊತ್ತು ಕೆಂಡ ಹಾಯುವಾಗ ಆಯತಪ್ಪಿ ಹೊಂಡಕ್ಕೆ ಬಿದ್ದ ವ್ಯಕ್ತಿಯನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ವಿವರ: ಗ್ರಾಮದ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಕೆಂಡದ ಹೊಂಡದ ಮೇಲೆ ನಡೆಯುವ ಸಾಂಪ್ರದಾಯಿಕ ಆಚರಣೆಯನ್ನು ನೆರವೇರಿಸಲು ವ್ಯಕ್ತಿಯೊಬ್ಬರು ಮುಂದಾಗಿದ್ದಾರೆ. ತಮ್ಮ 1 ವರ್ಷದ ಮಗಳನ್ನು ಹೊತ್ತು ಕೆಂಡ ಹಾಯಲು ಹೋದಾಗ, ಆಯತಪ್ಪಿ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಭಕ್ತಾದಿಗಳು ಧಾವಿಸಿ ಮಗುವನ್ನು ಮತ್ತು ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.

ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಶೀಘ್ರವೇ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಮಗುವನ್ನು ಕ್ರಿಟಿಕಲ್ ಕೇರ್ ಯೂನಿಟ್‌ನಲ್ಲಿ ಇರಿಸಲಾಗಿದೆ ಎಂದು ವರದಿ ಹೇಳಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net