ಕುಡಿದ ಅಮಲಿನಲ್ಲಿ ಸ್ನೇಹಿತನ ಗುಪ್ತಾಂಗ ಕತ್ತರಿಸಿದ ಗೆಳೆಯ!

hospital
Published on

ಒಡಿಶಾ: ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಜಗಳವಾಡಿದ ನಂತರ ತನ್ನ ಸ್ನೇಹಿತನ ಗುಪ್ತಾಂಗವನ್ನು ಕತ್ತರಿಸಿದ್ದಾನೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ.

ಭಗಬತ್ ದಾಸ್(30) ಸಂತ್ರಸ್ತ. ಅಕ್ಷ್ಯ ರೌತ್ ಕುಡಿದ ಅಮಲಿನಲ್ಲಿ ಜಗಳವಾಡಿದ ನಂತರ ತನ್ನ ಸ್ನೇಹಿತನ ಗುಪ್ತಾಂಗವನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ.

ಕೇಂದ್ರಪಾರ ಜಿಲ್ಲೆಯ ಕಡಲತೀರದಲ್ಲಿ ಭಾನುವಾರ ಇಬ್ಬರು ಸ್ನೇಹಿತರು ಸೇರಿ ಮದ್ಯ ಸೇವಿಸಿದ್ದಾರೆ. ಇಬ್ಬರು ನಡುವೆ ಯಾವುದೋ ವಿಚಾರವಾಗಿ ಜಗಳ ಶುರುವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ, ರೌತ್ ಹರಿತವಾದ ಆಯುಧದಿಂದ ದಾಸ್ ಅವರ ಗುಪ್ತಾಂಗವನ್ನು ಕತ್ತರಿಸಿ ಹಾಕಿದ್ದಾನೆ. ನಂತರ ಸ್ಥಳದಿಂದ ಓಡಿಹೋಗಿದ್ದಾನೆ.

ದಾಸ್ ಅವರನ್ನು ಮೊದಲು ರಾಜನಗರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಆದರೆ ನಂತರ ಅವರ ಸ್ಥಿತಿ ಹದಗೆಟ್ಟಿದ್ದರಿಂದ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net