ಘೋರ ದುರಂತ: ಆಟ ಆಡುತ್ತಿದ್ದಾಗಲೇ ಹಠಾತ್ ಸಾವು..!

telangan man dies
Published on

ತೆಲಂಗಾಣ: ಇಂದಿನ ಆಧುನಿಕ ಜೀವನಶೈಲಿಯಿಂದಾಗಿ ಯಾರಿಗೆ ಎಲ್ಲಿ? ಯಾವಾಗ? ಹೇಗೆ ಸಾವು ಬರುತ್ತದೆ ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಆಟವಾಡುತ್ತಿರುವಾಗಲೇ ವ್ಯಕ್ತಿಯೊರ್ವ ಮೃತಪಟ್ಟಿರುವ ದುರಂತ ಘಟನೆ ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದಿದೆ.

ವೆಂಕಟ ಗಂಗಾರಾಮ್(53) ಎಂಬುವರು ಶುಕ್ರವಾರ ಬೆಳಿಗ್ಗೆ ಇತರ ಮೂವರ ಜೊತೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದಾಗ ಏಕಾಏಕಿ ನೆಲಕ್ಕೆ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಸಹ ಆಟಗಾರರು ಆತನ ಸಹಾಯಕ್ಕೆ ಧಾವಿಸಿ CPR ನೀಡಲು ಪ್ರಯತ್ನಿಸಿದರು. ಕೊನೆಗೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವೆಂಕಟ್​ ಮೃತಪಟ್ಟಿದ್ದಾರೆ.

ಈ ವರ್ಷದ ಆರಂಭದಲ್ಲಿ ಕೂಡ ಇಂತಹ ಘಟನೆಯು ಜರುಗಿತ್ತು. ಫೆಬ್ರವರಿ ತಿಂಗಳಿನಲ್ಲಿ ಹೈದರಾಬಾದ್‌ನಲ್ಲಿ ಬ್ಯಾಡ್ಮಿಂಟನ್ ಆಡುವಾಗ 38 ವರ್ಷದ ವ್ಯಕ್ತಿಯೊಬ್ಬರು ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net