ಹಬ್ಬದ ಸಂಭ್ರಮದಲ್ಲಿ ಹೆಜ್ಜೆ ಹಾಕುತ್ತ ಕುಸಿದು ಬಿದ್ದ ವ್ಯಕ್ತಿ; ಹೃದಯಾಘಾತಕ್ಕೀಡಾಗಿ ಸಾವು

Nadaf
Published on

ಗದಗ: ದೇಶ ಹಾಗೂ ರಾಜ್ಯದಲ್ಲಿ ಕುಸಿದು ಬಿದ್ದು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗುತ್ತಿರುವ ಪ್ರಕರಣಗಳ ಸರಣಿ ಮುಂದುವರಿದಿದೆ. ಇಂದು ಇನ್ನೊಬ್ಬ ವ್ಯಕ್ತಿ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು, ಕೆಲವೇ ನಿಮಿಷಗಳಲ್ಲಿ ಸಾವಿಗೀಡಾಗಿದರು.

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಇಮಾಮ್ ಸಾಬ್ ನದಾಪ (55) ಸಾವಿಗೀಡಾದ ವ್ಯಕ್ತಿ. ಇವರು ಗ್ರಾಮದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಹೆಜ್ಜೆ ಮಡಲು ಆಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ.

ಹೆಜ್ಜೆ ಮಜಲು ಸಲುವಾಗಿ ಹೆಜ್ಜೆ ಹಾಕುತ್ತಿದ್ದಾಗ ಕುಸಿದು ಬಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆಯೇ ಸಾವಿಗೀಡಾದರು. ಮೃತಪಟ್ಟವರ ಕುರಿತಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net