VIDEO| ಸೊಸೆ ಮದುವೆಯಲ್ಲಿ ನೃತ್ಯ ಮಾಡುತ್ತಲೇ ಪ್ರಾಣ ಬಿಟ್ಟ ಮಾವ!

Man dies of heart attack while dancing at wedding in Chhattisgar
Published on

ಛತ್ತೀಸ್‌ಗಢ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಹೀಗೆ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದ ವ್ಯಕ್ತಿಯೊರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಸೋದರ ಸೊಸೆಯ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.

ದಿಲೀಪ್ ರೌಜ್ಕರ್ ಮೃತ. ಈತ ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದರು. ದಿಲೀಪ್ ರೌಜ್ಕರ್ ಛತ್ತೀಸ್‌ಗಢದ ಬಲೋದ್ ಜಿಲ್ಲೆಯ ನಿವಾಸಿಯಾಗಿದ್ದರು. ಮದುವೆಯಲ್ಲಿ ನೃತ್ಯ ಮಾಡುತ್ತಾ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ.

ವಿಡಿಯೋದಲ್ಲಿ ಏನಿದೆ?: ಮೇ 4 ಮತ್ತು 5 ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ವ್ಯಕ್ತಿ ತನ್ನ ಸೊಸೆಯ ಮದುವೆಯಲ್ಲಿ ನೃತ್ಯ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದನು. ನೃತ್ಯ ಮಾಡುತ್ತಾ ಮದುವೆ ಮಂಟಪದಲ್ಲಿಯೇ ಕುಸಿದು ಬಿದ್ದಿದ್ದಾನೆ. ನಂತರ ಅಲ್ಲಿರುವವರು ಗಮನಿಸಿ ನೋಡಿದ್ದಾರೆ. ಅಷ್ಟರಲ್ಲಾಗಲೇ ಆತನ ಪ್ರಾಣಪಕ್ಷಿ ಹಾರಿ ಹೋಗಿದೆ. ಇಡೀ ಘಟನೆಯ ವಿಡಿಯೋ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net