ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತದಿಂದ ಕುಸಿದು ಬಿದ್ದ ವ್ಯಕ್ತಿ ಸಾವು! Heart Attack ವಿಡಿಯೋ ನೋಡಿ

Man Dies Of Heart Attack While Working Out At Gym In Jabalpur
Published on

ಉತ್ತರ ಪ್ರದೇಶ : ( Heart Attack ) ಜಿಮ್​​​ನಲ್ಲಿ ವರ್ಕೌಟ್‌  ಸಮಯದಲ್ಲಿ ಹೃದಯಾಘಾತದಿಂದ ಜನರು ಸ್ಥಳದಲ್ಲೇ ಕುಸಿದು ಬಿದ್ದು ಸಾಯುವ ಅನೇಕ ಘಟನೆಗಳನ್ನು ನಾವು ನೋಡುತ್ತಿದ್ದೇವೆ. ಇತ್ತೀಚೆಗೆ ಇದೇ ರೀತಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.  ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ.

ಗೋರಖ್‌ಪುರ ಪ್ರದೇಶದಲ್ಲಿ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ 52 ವರ್ಷದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ಮೃತನನ್ನು ಯತೀಶ್ ಸಿಂಘೈ ಎಂದು ಗುರುತಿಸಲಾಗಿದೆ. ಘಟನೆ ನಡೆದ ದಿನ ಯತೀಶ್ ಬೆಳಿಗ್ಗೆ 6:45 ರ ಸುಮಾರಿಗೆ ಜಿಮ್ ತಲುಪಿದ್ದರು. ಅವರು ಎಂದಿನಂತೆ ವಿವಿಧ ಜಿಮ್ ಯಂತ್ರಗಳನ್ನು ಬಳಸಿ ತಮ್ಮ ವ್ಯಾಯಾಮವನ್ನು ಪ್ರಾರಂಭಿಸಿದರು. ಆದರೆ ಇದ್ದಕ್ಕಿದ್ದಂತೆ ನೆಲದ ಮೇಲೆ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಈಗಾಗಲೇ  ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದರು.

ವಿಶ್ವಾದ್ಯಂತ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. 40 ವರ್ಷಕ್ಕಿಂತ ಮೇಲ್ಪಟ್ಟವರು  ಕಠಿಣ ದೈಹಿಕ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳುವ ಮೊದಲು ಪೂರ್ಣ ದೇಹದ ತಪಾಸಣೆಗೆ ಒಳಗಾಗಬೇಕು ಮತ್ತು ವೈದ್ಯರನ್ನು ಸಂಪರ್ಕಿಸಬೇಕು ಎಂದು ವೈದ್ಯಕೀಯ ತಜ್ಞರು ಸಲಹೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net