ಕೊಲೆ ಪ್ರಕರಣದ ಬಂಧಿತ ಆರೋಪಿ ಛತ್ತೀಸ್‌ಗಢ ಜೈಲಿನಲ್ಲಿ ಸಾವು; ಟ್ರೈನಿ ಐಪಿಎಸ್ ಅಧಿಕಾರಿ ಅಮಾನತು!

police
Published on

ರಾಯ್‌ಪುರ: ಸೆಪ್ಟೆಂಬರ್ 15 ರಂದು ನಡೆದ ಉಪ ಸರಪಂಚ್‌ನ ಹತ್ಯೆಗೆ ಸಂಬಂಧಿಸಿದಂತೆ ಬಂಧಿತನಾದ 27 ವರ್ಷದ ವ್ಯಕ್ತಿ ಛತ್ತೀಸ್‌ಗಢದ ಕಬೀರ್‌ಧಾಮ್ ಜಿಲ್ಲೆಯಲ್ಲಿ ಬುಧವಾರ ಮೃತಪಟ್ಟಿದ್ದು, ರಾಜ್ಯ ಸರ್ಕಾರವು ಜಿಲ್ಲೆಯ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯನ್ನು (ಎಎಸ್‌ಪಿ) ಅಮಾನತುಗೊಳಿಸಿ ಆದೇಶ ಮಾಡಿದೆ.

ಉಪ ಸರಪಂಚ್ ರಘುನಾಥ್ ಸಾಹು ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹಲವಾರು ಜನರು ದಾಳಿ ಮಾಡಿದ ಸ್ವಲ್ಪ ಸಮಯದ ನಂತರ ಕಬೀರಧಾಮ್‌ನ ರೆಂಗಾಖರ್ ಪೊಲೀಸ್ ಠಾಣೆಯ ಅಧಿಕಾರಿಗಳು ಭಾನುವಾರ ಪ್ರಶಾಂತ್ ಸಾಹು ಎಂಬಾತನನ್ನು ಇತರ 68 ಮಂದಿಯೊಂದಿಗೆ ವಶಕ್ಕೆ ತೆಗೆದುಕೊಂಡಿದ್ದರು. ಗ್ರಾಮದ ಮತ್ತೊಬ್ಬ ವ್ಯಕ್ತಿಯ ಹತ್ಯೆಯಲ್ಲಿ ಭಾಗಿಯಾಗಿದ್ದಾನೆಂದು ಶಂಕಿಸಲಾಗಿದ್ದ ಸಾಹು ಮೃತಪಟ್ಟಿದ್ದು, ಆತನ ಕುಟುಂಬದ ಮೂವರು ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಬಂಧಿತ ಪ್ರಶಾಂತ್ ಸಾಹು ಅವರು ಮಂಗಳವಾರ ಅಸ್ವಸ್ಥತೆಯ ಬಗ್ಗೆ ದೂರು ನೀಡಿದ್ದು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬುಧವಾರ, ಅವರು ಕುಸಿದು ಬಿದ್ದು ಸ್ವಲ್ಪದರಲ್ಲೇ ಸಾವನ್ನಪ್ಪಿದ್ದಾರೆ.

ಕಸ್ಟಡಿ ಸಾವಿನ ಪ್ರಕರಣದ ನಂತರ ಪೊಲೀಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ ಎಂದು ರಾಜ್ಯದ ಗೃಹ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ವಿಜಯ್ ಶರ್ಮಾ ಹೇಳಿದ್ದಾರೆ.

“ಜೈಲಿನಲ್ಲಿನ ಸಾವು ತನಿಖೆಯ ವಿಷಯವಾಗಿದೆ. ಮಂಗಳವಾರ, ಅವರನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಈ ಸಮಯದಲ್ಲಿ ಅವರ ಕೈಯ ಎಕ್ಸ್-ರೇ ಮಾಡಲಾಯಿತು. ವೈದ್ಯರ ಪ್ರಕಾರ, ವರದಿ ಸಾಮಾನ್ಯವಾಗಿದೆ. ಬುಧವಾರ ಪಂಚನಾಮೆಯ ವೇಳೆ ಮೃತರ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದ್ದವು. ಅವರ ಒಳಾಂಗಗಳ ಮಾದರಿಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಅದರ ವರದಿಗಾಗಿ ಕಾಯಲಾಗುತ್ತಿದೆ ಎಂದು ಶರ್ಮಾ ಸುದ್ದಿಗಾರರಿಗೆ ತಿಳಿಸಿದರು.

ಇತರ ಕೆಲವು ಬಂಧಿತ ವ್ಯಕ್ತಿಗಳಿಗೂ ಗಾಯದ ಗುರುತುಗಳಿವೆ ಮತ್ತು ಉನ್ನತ ಅಧಿಕಾರಿಗಳ ಆದೇಶದ ಮೇರೆಗೆ ಪೊಲೀಸರು ಅವರನ್ನು ಥಳಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸಿಎಂ ನಿರ್ದೇಶನದ ಮೇರೆಗೆ ಎಎಸ್ಪಿ ವಿಕಾಸ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ,'' ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net