ಚಲಿಸುತ್ತಿದ್ದ ಮೆಟ್ರೋ ರೈಲಿನ ಮುಂದೆ ಜಿಗಿದು ವ್ಯಕ್ತಿ ಸಾವು!

Untitled design - 2023-07-31T175220.911
Published on

ನವದೆಹಲಿ: ನಜಾಫ್‌ಗಢ್ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ಸೋಮವಾರ (ಜುಲೈ 31) ದೆಹಲಿಯಲ್ಲಿ ವರದಿಯಾಗಿದೆ.

ಘಟನೆಯ ವಿವರ: ಸೋಮವಾರ ಬೆಳಗ್ಗೆ 9:26ರ ಸಮಯಕ್ಕೆ ದೆಹಲಿಯ ನಜಾಫ್‌ಗಢದಲ್ಲಿ ವ್ಯಕ್ತಿಯೊಬ್ಬ ರೈಲಿನ ಮುಂದೆ ಜಿಗಿದು ಸಾವನ್ನಪ್ಪಿದರು ಎಂದು ಹಿರಿಯ​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಪ್ರಾಣ ಕಳೆದುಕೊಂಡ ವ್ಯಕ್ತಿಯನ್ನು ನಜಾಫ್‌ಗಢದ ಪ್ರೇಮ್ ನಗರದ ನಿವಾಸಿ ಮನೀಶ್ ಕುಮಾರ್ ಎಂದು ಗುರುತಿಸಲಾಗಿದೆ.

"ಘಟನೆ ಸಂಭವಿಸಿದ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಮೃತ ಕುಮಾರ್ ಉತ್ತರಾಖಂಡದ ದೇವಪ್ರಯಾಗದಲ್ಲಿ ಗ್ರಂಥಪಾಲಕರಾಗಿದ್ದರು. ಅವರಿಗೆ ಮದುವೆಯಾಗಿದ್ದು, ಓರ್ವ ಮಗಳಿದ್ದಾಳೆ. ಸಿಆರ್‌ಪಿಸಿಯ ಸೆಕ್ಷನ್ 174ರ ಅಡಿಯಲ್ಲಿ ವಿಚಾರಣೆ ಪ್ರಕ್ರಿಯೆಗಳನ್ನು ಮಾಡಲಾಗುತ್ತಿದೆ, ಮತ್ತು ಹೆಚ್ಚಿನ ವಿಚಾರಣೆ ನಡೆಯುತ್ತಿದೆ" ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net