ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಗಾಯಾಳುವಿನ ಮೇಲೆ ದರ್ಪ: ತಲೆ ಮೇಲೆ ಮೂತ್ರ ವಿಸರ್ಜನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದನೆ

men in street night
ಸಾಂದರ್ಭಿಕ ಚಿತ್ರ
Published on

ಆಗ್ರಾ: ಇತ್ತೀಚಿನ ದಿನಗಳಲ್ಲಿ ಅಮಾನವೀಯ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗಾಯಗೊಂಡು ಅರೆ ಪ್ರಜ್ಞಾವಸ್ಥೆಯಲ್ಲಿ ನೆಲದ ಬಿದ್ದಿದ್ದ ವ್ಯಕ್ತಿಯ ಮೇಲೆ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ ಬಳಿ ನಡೆದಿದೆ.

ಇದನ್ನೂ ಓದಿ: ನದಿಯಿಂದ ಡಾಲ್ಫಿನ್ ಹಿಡಿದು ತಿಂದ ಮೀನುಗಾರರು: ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ ಪೊಲೀಸರು

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ 30 ಸೆಕೆಂಡ್‌ಗಳ ಈ ವಿಡಿಯೋದಲ್ಲಿ, ಗಾಯಗೊಂಡಿರುವ ವ್ಯಕ್ತಿಯೊಬ್ಬ ನೆಲದ ಮೇಲೆ ಬಿದ್ದಿದ್ದು, ಕೆಲವರು ಆತನನ್ನು ಸುತ್ತುವರೆದಿದ್ದಾರೆ. ಈ ವೇಳೆ ಗಾಯಳುವಿನ ತಲೆಗೆ ಒದ್ದು. ಮೂತ್ರ ವಿಸರ್ಜನೆ ಮಾಡುವುದರ ಜತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವ ದೃಶ್ಯ ಸೆರೆಯಾಗಿದೆ.

ವೀಡಿಯೋ ಹೊರಬಿದ್ದ ನಂತರ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿ ಆದಿತ್ಯ ಎಂಬಾತನನ್ನು ಬಂಧಿಸಿದ್ದು, ಇತರರಿಗಾಗಿ ಶೋಧ ನಡೆಯುತ್ತಿದೆ. ಬಂಧಿತನ ವಿರುದ್ಧ ಕೊಲೆ ಯತ್ನದಡಿ ಪ್ರಕರಣ ದಾಖಲಿಸಲಾಗಿದ್ದು, ಈ ವಿಡಿಯೋ ಸುಮಾರು ಮೂರು-ನಾಲ್ಕು ತಿಂಗಳ ಹಳೆಯದಾಗಿದೆ.

ಇದನ್ನೂ ಓದಿ: ಸಾಂಪ್ರದಾಯಿಕವಾಗಿ ಸಾಕ್ಷಾತ್​​ ಶಿವನನ್ನೇ ಮದುವೆಯಾದ ಯುವತಿ: ಕುಟುಂಬಸ್ಥರಿಂದ ಸಾಥ್​​..!

ಅಲ್ಲದೇ, ಈ ಬಗ್ಗೆ ಆಗ್ರಾದ ಯಾವುದೇ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದು, ಬಂಧಿತ ಯುವಕ ಆದಿತ್ಯನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net