11 ವರ್ಷದ ಮಗಳ ಮೇಲೆ ಅಪ್ಪನಿಂದಲೇ ಅತ್ಯಾಚಾರ; ಪತ್ನಿಯ ಕೈಯಲ್ಲಿ ಸಿಕ್ಕಿಬಿದ್ದ

Rape 18
Published on

ಪುಣೆ: ಪುಟ್ಟ ಮಗಳನ್ನು ಮಡಿಲಲ್ಲಿ ಇಟ್ಟುಕೊಂಡು ರಕ್ಷಿಸಬೇಕಾದ ತಂದೆ, ಆಕೆಯ ಮೇಲೆ ಕ್ರೂರವಾಗಿ ಅತ್ಯಾಚಾರ ನಡೆಸಿದ ಘಟನೆ ಪುಣೆಯ ಪಿಂಪ್ರಿ- ಚಿಂಚವಾಡಾದಲ್ಲಿ ನಡೆದಿದೆ.

11ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆಕೆಯ ಅಪ್ಪ (34)ನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಾಯಿಯ ದೂರಿನ ಅನ್ವಯ ವ್ಯಕ್ತಿಯನ್ನು ಬಂಧಿಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ಎರಡು ವಾರಗಳ ಹಿಂದೆ ಮೊದಲ ಬಾರಿಗೆ ಈ ವ್ಯಕ್ತಿ ತನ್ನ 11 ವರ್ಷದ ಮಗಳ ಮೇಲೆ ಅತ್ಯಾಚಾರ ಮಾಡಿದ್ದ. ಅದಾದ ಬಳಿಕ ಗುರುವಾರ ರಾತ್ರಿ ಮತ್ತೊಮ್ಮೆ, ಮನೆಯ ಸಮೀಪದ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗಿ ರೇಪ್​ ಮಾಡಿದ್ದ.  ಇದು ಅವನ ಪತ್ನಿಯ ಗಮನಕ್ಕೆ ಬಂದಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಈ ವ್ಯಕ್ತಿ ತನ್ನ ಕಾರುಗಳನ್ನು ವಿವಿಧ ಕಂಪನಿಗಳಿಗೆ ಲೀಸ್​ಗೆ ಕೊಟ್ಟು ಸಂಪಾದನೆ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net