ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು | Illness

Illness
Published on

Illness: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 50 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​​ನಲ್ಲಿ ನಡೆದಿದೆ.

ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದ ಗೋಪಾಲ್ ಪಾಂಚಾಲ್ ಅವರು ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಾಣದ ಕಾರಣ ಅವರು ತೀವ್ರ ದುಃಖಿತರಾಗಿದ್ದರು.

ಗೋಪಾಲ್ ಅವರ ಕುಟುಂಬ ಸದಸ್ಯರು ಪಕ್ಕದ ಕೋಣೆಯಲ್ಲಿ ಮಲಗಿದ್ದಾಗ ಹಾಲ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ತಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net