

ಅಮೆರಿಕಾ: ಇತ್ತೀಚೆಗೆ ಅಮೆರಿಕಾದ ಹಲವು ನಗರ ಪ್ರದೇಶಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಅಂಗಡಿ ಮಾಲೀಕರು ತೀವ್ರ ಕಟ್ಟೆಚ್ಚೆರ ವಹಿಸಿದ್ದಾರೆ. ಈ ಮಧ್ಯೆ ಅಂಗಡಿಯೊಳಗೆ ಬಂದ ದರೋಡೆಕೋರ ತನ್ನ ಕೈಚಳಕ ತೋರಿಸಲು ಯತ್ನಿಸಿದ್ದಕ್ಕೆ, ಆತನಿಗೆ ಸ್ಥಳದಲ್ಲಿದ್ದ ವ್ಯಕ್ತಿ ಬಡಿಗೆಯಿಂದ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಕ್ಯಾಲಿಫೋರ್ನಿಯಾದಲ್ಲಿರುವ ಅಂಗಡಿಗೆ ನುಗ್ಗಿದ ಕಳ್ಳನು ದೊಡ್ಡ ಬಾಕ್ಸ್ನಲ್ಲಿ ಹಲವಾರು ಸಾಮಾಗ್ರಿಗಳನ್ನು ತುಂಬಿಸಿಕೊಳ್ಳುತ್ತಿದ್ದ, ಈ ವೇಳೆ ಸ್ಟೋರ್ನಲ್ಲಿದ್ದ ವ್ಯಕ್ತಿಯೊಬ್ಬರು ಆತನನ್ನು ತಪ್ಪಿಸಿಕೊಳ್ಳದಂತೆ, ಬಲವಾಗಿ ಹಿಡಿದುಕೊಂಡಿದ್ದಾರೆ. ಇದನ್ನು ನೋಡಿದ ಮತ್ತೊಬ್ಬ ವ್ಯಕ್ತಿ ಓಡಿ ಬಂದು, ದೊಣ್ಣೆಯಿಂದ ಕಳ್ಳನಿಗೆ ಮನಬಂದಂತೆ ಥಳಿಸಿದ್ದಾರೆ.
ಈ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ,(ಏಜೆನ್ಸೀಸ್).