

ಮೊರೆನಾ: ತಮಾಷೆಗಾಗಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣ ಮಧ್ಯಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ ವೇಳೆ ವೇದಿಕೆ ಮೇಲೆಯೇ ಕುಸಿದು ಬಿದ್ದ ಸಚಿವ..
ಮೊರೆನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ಕಲ್ಲು ತೂರಾಟ ನಡೆಸಿದ ಆರೋಪಿಯನ್ನು ಫಿರೋಜ್ ಖಾನ್ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ದೆಹಲಿಗೆ ಹೋಗುತ್ತಿತ್ತು. ಈ ವೇಳೆ ಬಾನ್‌ಮೋರ್ ರೈಲು ನಿಲ್ದಾಣದ ಬಳಿ ರೈಲಿಗೆ ಕಲ್ಲು ತೂರಾಟ ನಡೆದಿದೆ. ಘಟನೆಯಿಂದಾಗಿ ರೈಲಿನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ.
ಈ ಕಲ್ಲು ತೂರಾಟದ ನಂತರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಕೋಲಾಹಲ ಉಂಟಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ. ಇದೀಗ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ವೇಳೆ ಆರೋಪಿಯು ಕಲ್ಲು ತೂರಾಟ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೇ, ತಾನು ಈ ಕೃತ್ಯವನ್ನು ತಮಾಷೆಗಾಗಿ ಮಾಡಿದ್ದೇನೆ ಎಂದು ಹೇಳಿದ್ದಾನೆ.
ಇದನ್ನೂ ಓದಿ: ಆಟವಾಡುತ್ತಿದ್ದಾಗ ನೀರಿನ ಬಕೆಟ್‌ಗೆ ಬಿದ್ದು ಪ್ರಾಣ ಬಿಟ್ಟ 16 ತಿಂಗಳ ಮಗು
ಬಂಧಿತ ಫಿರೋಜ್ ಖಾನ್‌ನ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲವಾದರೂ, ಯುವಕನ ಕುರಿತು ಇನ್ನೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಣಿ ಕಮಲಾಪತಿ-ಹಜರತ್ ನಿಜಾಮುದ್ದೀನ್ ವಂದೇ ಭಾರತ್ ರೈಲನ್ನು ಈ ವರ್ಷದ ಏಪ್ರಿಲ್‌ನಲ್ಲಿ ಲೋಕಾರ್ಪಣೆಗೊಳಿಸಲಾಗಿತ್ತು.(ಏಜೆನ್ಸೀಸ್)