ರೈಲ್ವೆ ನಿಲ್ದಾಣದಲ್ಲಿ ಗೋಸುಂಬೆಯನ್ನು ಮಾರಾಟ ಮಾಡಲು ಯತ್ನ; ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

maharashtra
Published on

ಮಹಾರಾಷ್ಟ್ರ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ಗೋಸುಂಬೆಯನ್ನು ಮಾರಲು ಯತ್ನಿಸಿದ ವ್ಯಕ್ತಿಯನ್ನು ಪತ್ತೆಹಚ್ಚಿದ ಪೊಲೀಸರು, ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ದೇವೇಂದ್ರ ಭೋರ್ ಎಂದು ಗರುತಿಸಲಾಗಿದ್ದು, ಶನಿವಾರ ರಾತ್ರಿ ಸುಳಿವಿನ ಮೇರೆಗೆ ಅರಣ್ಯ ಅಧಿಕಾರಿಗಳು ಆತನನ್ನು ಬಂಧಿಸಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಟಿಟ್ವಾಲಾ ರೈಲ್ವೆ ನಿಲ್ದಾಣದಲ್ಲಿ ಬಣ್ಣ ಬದಲಾಯಿಸುವ ಗೋಸುಂಬೆಯನ್ನು 6,000 ರೂ.ಗೆ ಅನ್ಯ ವ್ಯಕ್ತಿಯೊಬ್ಬನಿಗೆ ಮಾರಾಟ ಮಾಡಲು ಮುಂದಾಗಿದ್ದ ವೇಳೆ, ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಆರ್‌ಪಿಎಫ್ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ನೀಡಿದ್ದು, ಆರೋಪಿ ದೇವೇಂದ್ರ ಭೋರ್ ಎಂಬ ವ್ಯಕ್ತಿಯನ್ನು ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net