VIDEO| ತಂದೆಯೊಂದಿಗೆ ದ್ವೇಷ: ಮಕ್ಕಳ ಪ್ರಾಣ ತೆಗೆಯಲು ಯತ್ನಿಸಿದ ಕಾರು ಚಾಲಕ

car
ಸಾಂದರ್ಭಿಕ ಚಿತ್ರ
Published on

ಲಕ್ನೋ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರು ಅಮಾಯಕ ಮಕ್ಕಳನ್ನು ಕೊಲ್ಲಲು ಯತ್ನಿಸಿದ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದಿದೆ.

ಗೋವಿಂದ್ ಯಾದವ್ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ. ಮಕ್ಕಳ ತಂದೆಯೊಂದಿಗೆ ಕಾರು ಚಾಲಕನಿಗೆ ವೈಯಕ್ತಿಕ ದ್ವೇಷವಿತ್ತು. ಈ ಹಿನ್ನೆಲೆಯಲ್ಲಿ ಅಮಾಯಕ ಮಕ್ಕಳನ್ನು ಹತ್ಯೆ ಮಾಡಲು ನಿರ್ಧರಿಸಿದ್ದ ಎನ್ನಲಾಗಿದೆ.


ಇಬ್ಬರು ಮಕ್ಕಳು ಮತ್ತೊಂದು ಮಗುವನ್ನು ಕೈಯಲ್ಲಿ ಹಿಡಿದುಕೊಂಡು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಸ್ವಿಫ್ಟ್ ಡಿಜೈರ್ ಅವರ ಬಳಿಗೆ ಬಂದು ಚಕ್ರದಡಿಯಲ್ಲಿ ಹತ್ತಿಕ್ಕಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದ್ದು, ಅದೃಷ್ಟವಶಾತ್​ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಕ್ಕಳ ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net