VIDEO | ರೈಲ್ವೇ ನಿಲ್ದಾಣದಲ್ಲಿ ವ್ಯಕ್ತಿ ವರ್ಕೌಟ್​; ವಿಡಿಯೋ ವೈರಲ್​

Untitled design - 2023-10-09T122740.821
Published on

ಮುಂಬೈ: ರೈಲ್ವೇ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಮಾಡಿದ ವರ್ಕೌಟ್​ ವಿಡಿಯೋ ಇದೀಗ ಸೋಷಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​ ಆಗಿದೆ.

ಸಾಮಾನ್ಯವಾಗಿ ಅನೇಕರು ಹೆಚ್ಚಾಗಿ ಕಡಿಮೆ ಜನಸಂದಣಿ ಇರುವ ವಾತಾವರಣದಲ್ಲಿ ವ್ಯಾಯಾಮ ಮಾಡಲು ಬಯಸುತ್ತಾರೆ. ಬೆಳಗಿನ ಸಮಯದಲ್ಲಿ ಜಿಮ್​ ವರ್ಕೌಟ್​ ಮಾಡುವುದರಿಂದ ಮನಸ್ಸಿಗೆ ಉಲ್ಲಾಸ ಮತ್ತು ದೇಹಕ್ಕೂ ಲಾಭಕಾರಿ ಎಂಬ ಯೋಚನೆ ಇಂದಿಗೂ ಹಲವರಲ್ಲಿದೆ.

ವ್ಯಕ್ತಿಯೊಬ್ಬರು ಬೆಳಗ್ಗೆ 6 ಗಂಟೆಗೆ ರೈಲ್ವೆ ನಿಲ್ದಾಣದ ಕೊನೆಯಲ್ಲಿ ಶಾಂತವಾಗಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯನ್ನು ರೈಲಿನೊಳಗಿದ್ದ ಪ್ರಯಾಣಿಕರೊಬ್ಬರು ದೂರದಿಂದಲೇ ಗಮನಿಸಿದ್ದು, ವರ್ಕೌಟ್​ ದೃಶ್ಯವನ್ನು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ನೆಟ್ಟಿಗರು ಹೆಚ್ಚಿನ ಸಂಖ್ಯೆಯಲ್ಲಿ ಲೈಕ್​ ಮಾಡಿ, ವಿಡಿಯೋ ವೀಕ್ಷಿಸಿದ್ದಾರೆ.

'thecomicalchingu.' ಎಂಬ ಹೆಸರಿನ ಪ್ರಯಾಣಿಕ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಈ ವೀಡಿಯೊವನ್ನು ಪೋಸ್ಟ್ ಮಾಡಿಕೊಂಡಿದ್ದಾರೆ. ತಮ್ಮ ದಿನನಿತ್ಯದ ಕೆಲಸಗಳನ್ನು ಮುಗಿಸಿಕೊಳ್ಳುವಷ್ಟರಲ್ಲಿ ದಿನವೇ ಅಂತ್ಯವಾಯಿತು ಎನ್ನುವ ಈ ಕಾಲದಲ್ಲಿ ಬೆಳಂಬೆಳಗ್ಗೆ ವ್ಯಕ್ತಿಯೊಬ್ಬರು ಶಿಸ್ತಿನಿಂದ ವ್ಯಾಯಾಮ ಮಾಡುತ್ತಿರುವ ದೃಶ್ಯ ಇದೀಗ ನೆಟ್ಟಿಗರ ಗಮನವನ್ನು ಸೆಳೆದಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net