

ದೆಹಲಿ: ದೆಹಲಿಯಿಂದ ಬ್ಯಾಂಕಕ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ(Plane) ವ್ಯಕ್ತಿಯೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಬುಧವಾರ ನಡೆದಿದೆ.
ಈ ಘಟನೆಯಲ್ಲಿ 2D ಯಲ್ಲಿ ಕುಳಿತಿದ್ದ ತುಷಾರ್ ಮಸಂದ್ ಎಂಬ ವ್ಯಕ್ತಿ, 1D ಯಲ್ಲಿ ಕುಳಿತಿದ್ದ ಸಹಪ್ರಯಾಣಿಕ ಬ್ರಿಡ್ಜ್‌ಸ್ಟೋನ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಹಿರೋಷಿ ಯೋಶಿಜಾನೆ ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಏರ್ ಇಂಡಿಯಾ ವಿಮಾನ ಸಂಸ್ಥೆಯು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಕ್ಕೆ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಮದ್ಯಪಾನ ಮಾಡಿದ್ದನು ಎಂದು ಏರ್ ಇಂಡಿಯಾ ವಿಮಾನ ಸಿಬ್ಬಂದಿ ತಿಳಿಸಿದ್ದು, ಘಟನೆ ಕುರಿತು ತನಿಖೆ ಮಾಡಲಾಗುವುದು ಎಂದು ನಾಗರಿಕ ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ.(ಏಜೆನ್ಸೀಸ್)