

ಉತ್ತರಪ್ರದೇಶ: ಸೋನಭದ್ರಾದಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಕಿವಿಗೆ ಮೂತ್ರ ವಿಸರ್ಜಿಸಿದ ಘಟನೆ ಇದೀಗ ಬೆಳಕಿಗೆ ಬಂದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಇಬ್ಬರನ್ನು ಬಂಧಿಸಿದ್ದಾರೆ.
ಘಟನೆಯ ವಿವರ: ಜುಲೈ 11 ರಂದು ಜಿಲ್ಲೆಯ ಜುಗೈಲ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಉತ್ತಮ ಸಂಬಂಧ ಹೊಂದಿದ್ದ ಇಬ್ಬರು ಸ್ನೇಹಿತರ ನಡುವೆ ಜಗಳ ಪ್ರಾರಂಭವಾಗಿದೆ. ಮದ್ಯ ಸೇವಿಸಿದ ಕಾರಣ ಮಾತಿನ ಜಟಾಪಟಿ ಹೊಡೆದಾಟ ಹಂತಕ್ಕೆ ತಲುಪಿದೆ. ಈ ವೇಳೆ ಜವಾಹರ್ ಪಟೇಲ್ ಎಂಬ ವ್ಯಕ್ತಿ ತನ್ನ ಸ್ನೇಹಿತ ಗುಲಾಬ್ ಕೋಲ್ ಎಂಬುವವನ ಮೇಲೆ ಮೊದಲು ಹಲ್ಲೆ ನಡೆಸಿ, ತದನಂತರ ಆತನ ಕಿವಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ ಬೆನ್ನಲ್ಲೇ ಪೊಲೀಸರು ಸೂಕ್ತ ವಿಚಾರಣೆ ನಡೆಸಿದ್ದಾರೆ. ಹಲ್ಲೆಗೊಳಗಾದ ಗುಲಾಬ್ ಕೋಲ್ ತನ್ನ ಸ್ನೇಹಿತನ ವಿರುದ್ಧ ದೂರು ದಾಖಲಿಸಿದ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ಪಟೇಲ್ ಮತ್ತು ಆತನ ಸಹಚರನನ್ನು ಬಂಧಿಸಿದ್ದಾರೆ,(ಏಜೆನ್ಸೀಸ್).