

ಉತ್ತರಪ್ರದೇಶ: ಆಸ್ಪತ್ರೆಯ ವಾರ್ಡ್‌ನಲ್ಲಿ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಘಟನೆಯೊಂದು ಉತ್ತರಪ್ರದೇಶದ ಬಲ್ಲಿಯಾದಲ್ಲಿ ವರದಿಯಾಗಿದೆ. ಈ ಆರೋಪದಡಿ ಆತನನ್ನು ಇದೀಗ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ಜಿಲ್ಲಾ ಆಸ್ಪತ್ರೆಯೊಳಗೆ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ವಿಕಾಸ್ ಸಿಂಗ್ ಎಂಬ ವ್ಯಕ್ತಿಯನ್ನು ನಾವು ಬಂಧಿಸಿದ್ದೇವೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡ ದಾಖಲಿಸಲಾಗಿದೆ" ಎಂದು ಪೊಲೀಸ್ ಅಧಿಕಾರಿ ವೈಭವ್ ಪಾಂಡೆ ತಿಳಿಸಿದ್ದಾರೆ.
ಸುಖಪುರ ಗ್ರಾಮದ ನಿವಾಸಿ ಸಂತ್ರಸ್ತೆಯ ದೂರಿನ ಪ್ರಕಾರ, ರಾತ್ರಿ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ವಿಕಾಸ್ ಸಿಂಗ್ ಎಂದು ಗುರುತಿಸಲ್ಪಟ್ಟ ವ್ಯಕ್ತಿ, ಚಿಕಿತ್ಸೆಗೆ ಎಂದು ದಾಖಲಾಗಿದ್ದ ಮಹಿಳೆಯ ವಾರ್ಡ್‌ಗೆ ಪ್ರವೇಶಿಸಿ ಆಕೆ ಮಲಗಿದ್ದ ವೇಳೆ ಮೂತ್ರ ವಿಸರ್ಜಿಸಿದ್ದಾನೆ ಎನ್ನಲಾಗಿದೆ. ಸದ್ಯ ಈ ಆರೋಪದಡಿ ಪೊಲೀಸರು ವಿಕಾಸ್ ಸಿಂಗ್ ಅನ್ನು ಬುಧವಾರ ಬಂಧಿಸಿದ್ದಾರೆ,(ಏಜೆನ್ಸೀಸ್).