

ಮುಂಡರಗಿ: ಪಟ್ಟಣದ ಜಗದ್ಗುರು ತೋಂಟದಾರ್ಯ ಶಾಖಾ ಮಠದಲ್ಲಿ ತಾಲೂಕು ಮಡಿವಾಳ ಸಮಾಜದ ವತಿಯಿಂದ ಆ. 23ರಂದು ಶ್ರಾವಣ ಮಾಸದ ನಿಮಿತ್ತ ಮನ ಮನೆಗೆ ಮಾಚಿದೇವ ಕಾರ್ಯಕ್ರಮ ಹಾಗೂ ಮಡಿವಾಳ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಮಾಜದ ಹಿರಿಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಜರುಗಲಿದೆ.
ಆ. 23ರ ಬೆಳಗ್ಗೆ 8:30ಕ್ಕೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ನಂತರ 10:30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಚಿತ್ರದುರ್ಗದ ಮಡಿವಾಳ ಗುರುಪೀಠದ ಡಾ. ಬಸವ ಮಾಚಿದೇವ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿಕೊಳ್ಳಲಿದ್ದಾರೆ. ಮಾಜಿ ಸಚಿವ ಎಸ್.ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು. ಜನಪದ ಕಲಾವಿದ ಗವಿಸಿದ್ದಯ್ಯ ಹಳ್ಳಿಕೇರಿಮಠ ಅವರು ಮಡಿವಾಳ ಮಾಚಿದೇವರ ವಚನ ಸಿಂಚನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.