

ಬೆಂಗಳೂರು: ಆರ್‌ಎಸ್‌ಎಸ್‌ಗೂ ರಾಮಮಂದಿರಕ್ಕೂ ಏನೂ ಸಂಬಂಧವಿಲ್ಲ. ಆದರೆ ಬಿಜೆಪಿಯು ಆರ್‌ಎಸ್‌ಎಸ್ ನವರನ್ನು ಬಳಸಿಕೊಂಡು ಮನೆ, ಮನೆಗೆ ತೆರಳಿ, ಅಕ್ಷತೆ ಕೊಟ್ಟು ಇಲ್ಲಿಂದಲೇ ರಾಮಮಂದಿರಕ್ಕೆ ನಮನ ಸಲ್ಲಿಸಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರು ಭಾವನೆ ಮೇಲೆ ರಾಜಕಾರಣ ಮಾಡುತ್ತಿದ್ದರೆ, ನಾವು ಜನರ ಬದುಕಿನ ಬಗ್ಗೆ ರಾಜಕಾರಣ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ 139 ನೇ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಾಂಗ್ರೆಸ್ ದೇಣಿಗೆ ಸಂಗ್ರಹ ಮಾಡುತ್ತಿದ್ದು, ಪೇಟಿಎಂ ಸೇರಿದಂತೆ ಇತರೇ ಡಿಜಿಟಲ್ ಪಾವತಿ ವ್ಯವಸ್ಥೆಯ ಮೂಲಕ ದೇಣಿಗೆ ನೀಡಿ, ಪಕ್ಷದ ಬಲವರ್ದನೆಗೆ ಸಹಕರಿಸಬೇಕು ಎಂದು ಕಾರ್ಯಕರ್ತರಿಗೆ ಕರೆನೀಡಿದರು.