ಮಂಡ್ಯ ಘಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ: ಸಿಎಂ

Siddaramaiah
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಮಂಡ್ಯ ಘಟನೆ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲಾಡಳಿತದ ವೈಫಲ್ಯದಿಂದ ಮಂಡ್ಯ ಘಟನೆ ನಡೆದಿದೆ ಎಂದು ಸಂಸದೆ ಸುಮಲತಾ ದೂಷಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತೇ ಹೊರತು ಯಾವುದೇ ಧರ್ಮ, ಜಾತಿ, ಪಕ್ಷದ ಧ್ವಜವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ ನೀಡಿದ ನಂತರ ಅದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದರು.

ಫೆಬ್ರವರಿ 8 ರಂದು ಮಂಡ್ಯ ಬಂದ್ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿಯವರು ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಂದ್ ಮಾಡುವ ಅಥವಾ ಮಾಡದಿರುವ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಇವರೇ ಮುಚ್ಚಳಿಕೆ ಪತ್ರ ನೀಡಿ, ನಂತರ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾರಿಸಿ, ತಮ್ಮ ಮುಚ್ಚಳಿಕೆಯನ್ನು ತಾವೇ ಉಲ್ಲಂಘನೆ ಮಾಡಿರುವುದು ತಪ್ಪು ಎಂದು ಸಿದ್ದರಾಮಯ್ಯ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net