

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿರುವ ಗೆಜ್ಜಲಗೆರೆಯಲ್ಲಿರುವ ಮನ್‌ಮುಲ್ ತುಪ್ಪ ಹಾಗೂ ಖೋವಾ ತಯಾರಿಕಾ ಘಟಕದಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳ ತೊಡಗಿದೆ.
ಮನ್‌ಮುಲ್‌ನ ಮೆಗಾ ಡೇರಿಗೆ ದಿಢೀರ್ ಬೆಂಕಿ ತಗುಲಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಎಂದು ಹೇಳಲಾಗಿದೆ. ಕಳೆದ ಐದು ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಮೆಗಾ ಡೇರಿಗೆ ಇಂದು ಬೆಳಗ್ಗಿನ ಜಾವದಲ್ಲಿ ಬೆಂಕಿ ಆವರಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳಕ್ಕೆ ಆಗಮಿಸಿ ಅಗ್ನಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ತುಪ್ಪ ಹಾಗೂ ಖೋವಾ ತಯಾರಿಕಾ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಘಟನೆ ಇದೀಗ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಮಾಧ್ಯಮದವರನ್ನು ಒಳಗೆ ಪ್ರವೇಶಿಸಲು ನಿರ್ದೆಶಕರು ಹಾಗೂ ಎಂಡಿ ನಿರಾಕರಿಸಿದ್ದಾರೆ. ಈ ಗೌಪ್ಯತೆ ಯಾಕೆ ಎಂದು ಮನ್ ಮುಲ್ ಹೊರ ಗೇಟ್ನಲ್ಲಿರುವ ಪತ್ರಕರ್ತರು ಪ್ರಶ್ನಿಸಿದ್ದಾರೆ.