ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿದ ಚಿರತೆಗಳ ಹಾವಳಿ; ಸಮಸ್ಯೆ ಬಗೆಹರಿಸಲು ಸಿಎಂಗೆ ಪತ್ರ ಬರೆದ ಶಾಸಕ ದಿನೇಶ್‌ ಗೂಳಿಗೌಡ

mandya lepod
Published on

ಮಂಡ್ಯ: ಮಂಡ್ಯ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಕೆಲವು ಗ್ರಾಮೀಣ ಪ್ರದೇಶಗಳ ಗ್ರಾಮಗಳಿಗೂ ಪ್ರವೇಶಿಸಿ ಜನ ಜಾನುವಾರುಗಳಿಗೆ ಉಪಟಳ ನೀಡುತ್ತಿವೆ‌. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ದಿನೇಶ್​ ಗೂಳಿಗೌಡ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಶಾಸಕರು 'ಮಂಡ್ಯ ಜಿಲ್ಲೆಯಲ್ಲಿ ಚಿರತೆ ಹಾವಳಿಯನ್ನು ತುರ್ತಾಗಿ ತಡೆಗಟ್ಟಬೇಕಿದೆ. ವಿಶ್ವವಿಖ್ಯಾತ ಕೆಆರ್‌ಎಸ್‌ ಸೇರಿದಂತೆ ಎಲ್ಲ ಕಡೆ ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚಿನ ಬೋನುಗಳನ್ನು ಇಟ್ಟು ಸೆರೆಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅರಣ್ಯ ಇಲಾಖೆಯು ಪ್ರಸ್ತುತ ಮುಖ್ಯಮಂತ್ರಿ ಬಳಿ ಇರುವುದರಿಂದ ತುರ್ತಾಗಿ ಕ್ರಮ ಕೈಗೊಂಡು ಸಾರ್ವಜನಿಕರನ್ನು ರಕ್ಷಿಸಬೇಕು. ಜೊತೆಗೆ ಚಿರತೆ ದಾಳಿಯ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು' ಎಂದು ಪರಿಸ್ಥಿತಿಯನ್ನು ವಿವರಿಸಿ ಸಲಹೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net