ಮಂಗಳೂರು ಕಮಿಷನರ್ ಎತ್ತಂಗಡಿ

mng--9 july Anupam agarwal
Published on

ಬೆಂಗಳೂರು: ಕೋಮು ದ್ವೇಷದ ಹಿನ್ನೆಲೆಯಲ್ಲಿ ಸಾಲುಸಾಲು ಕೊಲೆಗಳು ನಡೆದ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸೇರಿ ಅಧಿಕಾರಿಗಳನ್ನು ಎತ್ತಂಗಡಿ ಮಾಡಿದೆ.

ಇವರ ಸ್ಥಳಕ್ಕೆ ಡಿಐಜಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಿಸಿದೆ. ಮಂಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಅನಾಹುತ ಸಂಭವಿಸುತ್ತವೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಎಸ್‌ಪಿ ಎನ್. ಯತೀಶ್‌ರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಉಡುಪಿ ಎಸ್‌ಪಿ ಡಾ. ಕೆ. ಅರುಣ್ ಅವರನ್ನು ನೇಮಿಸಲಾಗಿದೆ. ಉಡುಪಿ ಜಿಲ್ಲೆ ಎಸ್‌ಪಿಯಾಗಿ ಹರಿರಾಮ್ ಶಂಕರ್ ವರ್ಗಾವಣೆಯಾಗಿದ್ದಾರೆ. ಇನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರನ್ನು ವರ್ಗಾವಣೆ ಮಾಡಿ ಇವರ ಸ್ಥಳಕ್ಕೆ ಬೊರಸೆ ಭೂಷಣ್ ಗುಲಾಬ್‌ರಾವ್ ಅವರನ್ನು ನೇಮಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net