ನಗರದ ಪ್ರಮುಖ ಆಯಕಟ್ಟಿನ ಸ್ಥಳಗಳಾದ ಪಂಪ್‌ವೆಲ್, ಕೂಳೂರು, ಕೊಟ್ಟಾರ ಚೌಕಿ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ ರಸ್ತೆಯಲ್ಲೇ ಸುಮಾರು ಎರಡರಿಂದ ಮೂರು ಅಡಿಗಳಷ್ಟು ನೀರು ನಿಂತಿತ್ತು. ಪಂಪ್‌ವೆಲ್ ಫ್ಲೈ ಓವರ್ ಅಡಿಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಕೃತಕ ಪ್ರವಾಹ ಭಯ ಆವರಿಸಿದ್ದು, ದ್ವಿಚಕ್ರ ವಾಹನಗಳು ಭಯದಲ್ಲೇ ಸಂಚರಿಸುವ ದೃಶ್ಯಗಳು ಕಂಡುಬಂದವು. ಕೂಳೂರು ಹೆದ್ದಾರಿಯಲ್ಲಿ ನೀರು ನಿಂತಿದ್ದರಿಂದ ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿತು.