ಮಂಗಳೂರು ವಿಷಾನಿಲ ಸೋರಿಕೆ ಮೂವರು ಮೃತ್ಯು

images (2)
Published on

ಮಂಗಳೂರು; ಇಲ್ಲಿನ ಹೊರ ವಲಯದ ಎಸ್ ಇ ಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನಿನ ಫ್ಯಾಕ್ಟರಿಯ ಟ್ಯಾಂಕೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮೃತಪಟ್ಟವರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು. ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಮೃತಪಟ್ಟವರು. ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ.
ಎಸ್ ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8ಮಂದಿ ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡಾ ಅಸ್ವಸ್ಥಗೊಂಡು, ಉಸಿರಾಟದಲ್ಲಿ ಏರುಪೇರಾಗಿದೆ. ಅಸ್ವಸ್ಥಗೊಂಡವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಮೂವರು ಮೃತಪಟ್ಟು 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net