ಮಂಗಳೂರು ವಿವಿ ಪದವಿ ಪರೀಕ್ಷೆಗಳು ಮುಂಡೂಡಿಕೆ

ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಜೂನ್ 15 ರಂದು ನಡೆಯಬೇಕಾಗಿದ್ದ ಆರನೇ ಸೆಮಿಸ್ಟರ್‌ನ ವಿವಿಧ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಜೂನ್ 15 ರಂದು ನಡೆಯಬೇಕಾಗಿದ್ದ ಆರನೇ ಸೆಮಿಸ್ಟರ್‌ನ ವಿವಿಧ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Published on
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಜೂನ್ 15 ರಂದು ನಡೆಯಬೇಕಾಗಿದ್ದ ಆರನೇ ಸೆಮಿಸ್ಟರ್‌ನ ವಿವಿಧ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಎಲ್ಲಾ ಪದವಿ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ಜೂನ್ 8 ರಿಂದ ಪ್ರಾರಂಭವಾಗಿದ್ದು, ಜುಲೈ 10ರ ವರೆಗೆ ನಡೆಯಲಿವೆ. ಆದರೆ, ಇದೇ ಅವಧಿಯಲ್ಲಿ ಎಂಬಿಎ ಮತ್ತು ಎಂಸಿಎ ಪ್ರವೇಶಾತಿಗಾಗಿ ಕೆಇಎ ವತಿಯಿಂದ ನಡೆಸಲಾಗುವ ಪಿಜಿಸಿಇಟಿ ಪರೀಕ್ಷೆಯು ಜೂನ್ 14ರಂದು ದಿಢೀರನೆ ನಿಗದಿಯಾಗಿದೆ. ಈ ಪಿಜಿಸಿಇಟಿ ಪರೀಕ್ಷಾ ಕೇಂದ್ರಗಳು ಕೇವಲ ಬೆಂಗಳೂರಿನಲ್ಲಿ ಮಾತ್ರ ಇರುವುದರಿಂದ, ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಒಂದೇ ಸಮಯದಲ್ಲಿ ಎರಡೂ ಪರೀಕ್ಷೆಗಳನ್ನು ಬರೆಯುವುದು ಅತ್ಯಂತ ಕಷ್ಟಕರ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಹಲವು ಕಾಲೇಜುಗಳ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿರುವ ವಿಶ್ವವಿದ್ಯಾನಿಲಯವು, ಜೂನ್ 15ರಂದು ನಿಗದಿಯಾಗಿದ್ದ 6ನೇ ಸೆಮಿಸ್ಟರ್‌ನ ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ ಮತ್ತು ಬಿಸಿಎ ಪದವಿ ಪರೀಕ್ಷೆಗಳನ್ನು ಮುಂದೂಡಿದೆ. ಬದಲಾದ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಆಯಾ ಕಾಲೇಜುಗಳಿಗೆ ಕಳುಹಿಸಿಕೊಡಲಾಗುವುದು ಎಂದು ವಿವಿ ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net