ಮಂಗಳೂರಿನಲ್ಲಿ ಕಂಪೌಂಡ್ ಕುಸಿದು ಇಬ್ಬರು ಸಾವು

Mangalore wall collapse
33333
Published on

ಮಂಗಳೂರು: ನಗರದ ಬಂಟ್ಸ್‌ಹಾಸ್ಟೆಲ್ ಬಳಿ ಶುಕ್ರವಾರ ಮಧ್ಯಾಹ್ನ ಕಂಪೌಂಡ್ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾನೆ. ಘಟನೆಯಲ್ಲಿ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.

ಭೀಮೇಶ್ ಬಾಗಲಕೋಟೆ(25), ಮಸ್ರಿಗುಲ್ ಪಶ್ಚಿಮ ಬಂಗಾಲ (27) ಮೃತರು. ಪಶ್ಚಿಮ ಬಂಗಾಲದ ಅನಿಗುಲ್ (26) ಗಾಯಾಳು. ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರಂಗಲಪಾಡಿ ಬಳಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಮೇಲಿಂದ ಗೋಡೆ ಕುಸಿದು ಬಿದ್ದಿದ್ದು, ಕೆಳಗೆ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಸಿಲುಕಿಕೊಂಡಿದ್ದರು. ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಘಟನೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net