ನಗರದ ಕದ್ರಿ ಪಾರ್ಕ್ ಮತ್ತು ಗಾಂಧಿ ಪಾರ್ಕ್‌ಗಳಲ್ಲಿ ಪಾಲಕರು ಮಕ್ಕಳೊಂದಿಗೆ ಕಾಲ ಕಳೆದರೆ, ಪಿಲಿಕುಳ ನಿಸರ್ಗಧಾಮಕ್ಕೆ ಹೊರಜಿಲ್ಲೆಗಳಿಂದ ನೂರಾರು ಬಸ್‌ಗಳು ಮತ್ತು ಖಾಸಗಿ ವಾಹನಗಳು ಆಗಮಿಸಿದ್ದವು. ಧಾರ್ಮಿಕ ಕ್ಷೇತ್ರಗಳಾದ ಸುಬ್ರಹ್ಮಣ್ಯ, ಧರ್ಮಸ್ಥಳ, ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಮದುವೆಗಳಿದ್ದ ಕಾರಣ ಭಕ್ತರ ಸಂಖ್ಯೆ ಗಣನೀಯ ಏರಿಕೆಯಾಗಿತ್ತು.