ಪರೀಕ್ಷಾ ಕೇಂದ್ರದಲ್ಲಿ ಜನಿವಾರ, ಮಾಂಗಲ್ಯಸರ ತೆಗೆಸದಿರಲು ಸೂಚನೆ: ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ | Mangalyasar

dk - 2025-04-28T160000.585
Published on

Mangalyasar : ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ಅಭ್ಯರ್ಥಿಗಳಿಗೆ ಜನಿವಾರ ತಗೆಸಿದ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ರೈಲ್ವೆ ಪರೀಕ್ಷಾ ವೇಳೆ ಜನಿವಾರ ಹಾಗೂ ಮಾಂಗಲ್ಯಸರ ತೆಗೆದು ಪರೀಕ್ಷಾ ಕೇಂದ್ರಕ್ಕೆ ಬರಬೇಕೆಂದು ಅಭ್ಯರ್ಥಿಗಳ ಪ್ರವೇಶಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಈ ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ವಿ.ಸೋಮಣ್ಣ, ''ಈ ವಿಷಯದ ಬಗ್ಗೆ ಇಂದು ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ'' ಎಂದಿದ್ದಾರೆ.

ಟ್ವಿಟರ್​ನಲ್ಲಿ ಬರೆದಿರೊದೇನು..?

ದಿನಾಂಕ 28, 29 ಮತ್ತು 30 ಏಪ್ರಿಲ್ 2025ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ.

ಈ ಬಗ್ಗೆ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿರುತ್ತಾರೆ.

ಈ ವಿಷಯದ ಬಗ್ಗೆ ಇಂದು ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ.

ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net