ಜಿಲ್ಲಾಡಳಿತದಿ೦ದ ಮಾವು ಮೇಳ 13ರಿಂದ

Untitled
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ತೋಟಗಾರಿಕೆ ಇಲಾಖೆ ಆಶ್ರಯದಲ್ಲಿ ಮೇ 13ರಿಂದ 17ರವರೆಗೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಮಾವು ಮೇಳ ಆಯೋಜಿಸಲಾಗಿದೆ. 13ರಂದು ಬೆಳಗ್ಗೆ 10.30ಕ್ಕೆ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಶಾಸಕ ಅರವಿಂದ ಚಂದ್ರಕಾ0ತ ಬೆಲ್ಲದ ಅಧ್ಯಕ್ಷತೆ ವಹಿಸುವರು ಎಂದು ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net