ಮಣಿಪುರದಲ್ಲಿ ಅಕ್ಟೋಬರ್​ 11.ರವರೆಗೂ ಮುಂದುವರೆಯಲಿದೆ ಮೊಬೈಲ್ ಇಂಟರ್ನೆಟ್ ಸೇವೆ ನಿಷೇಧ

ಮಅನ1
Published on

Manipur: ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆ (ಸೆಪ್ಟೆಂಬರ್ 27)ಯಿಂದ ಸೆಪ್ಟೆಂಬರ್ 29(ಶುಕ್ರವಾರ) ವರೆಗೆ ರಜೆ ಘೋಷಿಸಲಾಗಿತ್ತು. ಇದೀಗ ಷೇಧವನ್ನು ಅಕ್ಟೋಬರ್ 11 ರವರೆಗೆ ವಿಸ್ತರಿಸಲಾಗಿದೆ ಎಂದು ಮಣಿಪುರ ಪೊಲೀಸರು ಸರ್ಕ್ಯುಲರ್​​​ ಹೊರಡಿಸಿದ್ದಾರೆ. ಈಶಾನ್ಯ ರಾಜ್ಯದ ಕೆಲವು ಭಾಗಗಳಲ್ಲಿ ಅಶಾಂತಿ ಮತ್ತು ಹಿಂಸಾಚಾರದ ಘಟನೆಗಳ ಮುಂದುವರೆದ ನಿಟ್ಟಿನಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.


ಗಲಭೆಯ ನಡುವೆ ಹಿಂಸಾಚಾರವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಬಹುದು ಮತ್ತು ದ್ವೇಷದ ಭಾಷಣವನ್ನು ಬಳಸಬಹುದೆಂಬ ಭಯವಿದೆ ಎಂದು ಮಣಿಪುರದ ಪೊಲೀಸ್ ಮಹಾನಿರ್ದೇಶಕರು ಹೇಳಿದ್ದಾರೆ.


ರಾಜ್ಯ ಸರ್ಕಾರವು ಭಾನುವಾರ ಹೊರಡಿಸಿದ ಅಧಿಸೂಚನೆಯಲ್ಲಿ, “ಕೆಲವು ಸಮಾಜ ವಿರೋಧಿ ಶಕ್ತಿಗಳು ಸಾರ್ವಜನಿಕರ ಭಾವೋದ್ರೇಕಗಳನ್ನು ಪ್ರಚೋದಿಸುವ ಚಿತ್ರಗಳು, ದ್ವೇಷ ಭಾಷಣ ಮತ್ತು ದ್ವೇಷದ ವೀಡಿಯೊ ಸಂದೇಶಗಳನ್ನು ಪ್ರಸಾರ ಮಾಡಲು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ಬಳಸಿಕೊಳ್ಳುವ ಆತಂಕವಿದೆ.

ಇದು ಸಮಾಜದ ಶಾಂತಿಯುತ ಜೀವನಕ್ಕೆ ಧಕ್ಕೆ ತರಬಹುದು. ಮಣಿಪುರ ರಾಜ್ಯದಲ್ಲಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net