ಮಾಜಿ ಪ್ರಧಾನಿ ಮನಮೋಹನ್ ಸಿಂಗ್​​ಗೆ ಕರೊನಾ; ಏಮ್ಸ್​ ಆಸ್ಪತ್ರೆಗೆ ದಾಖಲು

manmohan singh
Published on

ನವದೆಹಲಿ : ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್ ಅವರಿಗೆ ಇಂದು ಕರೊನಾ ಪಾಸಿಟೀವ್ ಬಂದಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಯ ಟ್ರಾಮಾ ಸೆಂಟರ್​ಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಸಿಂಗ್​​ರ ಪರಿಸ್ಥಿತಿಯನ್ನು ತಜ್ಞರ ತಂಡ ಮೇಲ್ವಿಚಾರಣೆ ಮಾಡುತ್ತಿದ್ದು, ಅವರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಮನಮೋಹನ್​ ಸಿಂಗ್ ಅವರು ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ. ನಿನ್ನೆ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೊನಾ ಪರಿಸ್ಥಿತಿಯ ಬಗ್ಗೆ ಕಾಳಜಿ ವ್ಯಕ್ತಪಡಿಸಿ ಪತ್ರ ಬರೆದಿದ್ದ ಸಿಂಗ್, ಲಸಿಕೆಯ ಸಮರ್ಪಕ ಬಳಕೆಗೆ ಸಲಹೆಗಳನ್ನು ನೀಡಿದ್ದರು.

2009 ರಲ್ಲಿ ಎರಡನೇ ಬಾರಿ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸಿಂಗ್​ ಅವರನ್ನು, ಕಳೆದ ವರ್ಷ ಮೇ ತಿಂಗಳಲ್ಲಿ ಸಹ ಎದೆನೋವು ಉಂಟಾದ ಹಿನ್ನೆಲೆಯಲ್ಲಿ ಏಮ್ಸ್​ ಆಸ್ಪತ್ರೆಗೆ ಸೇರಿಸಲಾಗಿತ್ತು ಎನ್ನಲಾಗಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net