ಮಾಜಿ ಪ್ರಧಾನಿ ಮನಮೋಹನ್ ಸಿಂಗ್​ಗೆ ಡೆಂಘೆ

manmohan singh
Published on

ನವದೆಹಲಿ: ಅನಾರೋಗ್ಯದ ಕಾರಣ ಬುಧವಾರ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಡೆಂಘೆ ಇರುವುದು ಪತ್ತೆಯಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಏಮ್ಸ್) ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಅವರ ಆರೋಗ್ಯ ಸುಧಾರಿಸುತ್ತಿದೆ ಎಂದೂ ಹೇಳಿದ್ದಾರೆ. ಜ್ವರ ಮತ್ತು ಬಳಲಿಕೆಯಿಂದ ಆಸ್ಪತ್ರೆಗೆ ಸೇರಿದ್ದ ಹಿರಿಯ ಕಾಂಗ್ರೆಸ್ ನಾಯಕ ಸಿಂಗ್​ರಲ್ಲಿ ಪ್ಲೇಟ್​ಲೆಟ್ ಜಾಸ್ತಿಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಾ. ನಿತೀಶ್ ನಾಯ್ಕ್ ನೇತೃತ್ವದ ಹೃದ್ರೋಗ ತಜ್ಞರ ತಂಡವೊಂದು ಮಾಜಿ ಪ್ರಧಾನಿಯ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net