

ಬೆಂಗಳೂರು: ಭಾರತದ ಸದೃಢ ಆರ್ಥಿಕತೆಯ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ದಿಂದ ದೇಶ ಒಬ್ಬ ಅಪ್ರತಿಮ ಅರ್ಥಶಾಸ್ತ್ರಜ್ಞ ಹಾಗೂ ಆಡಳಿತಗಾರರನ್ನು ಕಳೆದುಕೊಂಡಂತಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಕಂಬನಿ ಮಿಡಿದಿದ್ದಾರೆ.
ಪ್ರಧಾನಿ ಆಗುವ ಮುನ್ನ ವಿಶ್ವದ ಅತ್ಯುತ್ತಮ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಭಾರತೀಯ ರಿಸರ್ವ್ ಬ್ಯಾಂಕ್‍ನ ಗವರ್ನರ್ ಆಗಿ, ಹಣಕಾಸು ಇಲಾಖೆ ಕಾರ್ಯದರ್ಶಿಯಾಗಿ, ಪ್ರಧಾನಿ ಮಂತ್ರಿಯ ಸಲಹೆಗಾರರಾಗಿ ಕಾರ್ಯನಿರ್ವಹಿಸುವುದರ ಮೂಲಕ ಭಾರತದ ಆರ್ಥಿಕ ವ್ಯವಸ್ಥೆಯನ್ನು ಸದೃಢಗೊಳಿಸಿದವರು.
90 ರ ದಶಕದಲ್ಲಿ ಉದಾರಿಕರಣ ಮತ್ತು ಜಾಗತೀಕರಣದ ವ್ಯಾಪ್ತಿಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆಯನ್ನು ಹೊಸ ದಿಕ್ಕಿಗೆ ತಂದಂತಹ ಅಪ್ರತಿಮ ಮೇಧಾವಿ. ಸರಳ ಸಜ್ಜನಿಕೆಯ ಪ್ರತೀಕವಾಗಿದ್ದ ಡಾಕ್ಟರ್ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖ ತಪ್ತರಾಗಿರುವ ಅವರ ಕುಟುಂಬಕ್ಕೆ ಭಗವಂತನು ಶಾಂತಿ, ನೆಮ್ಮದಿ ಹಾಗೂ ದುಃಖವನ್ನು ಸಂತೈಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.