

ಎಚ್.ಡಿ.ಕೋಟೆ: ಪಟ್ಟಣದ ಸಂತ ಜೋಸೆಫರ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ 2024-25ನೇ ಸಾಲಿನ ಕಸಬಾ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಸೇಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ವಾಲಿಬಾಲ್ ಹಾಗೂ ಥ್ರೋಬಾಲ್‌ನಲ್ಲಿ ಬಾಲಕಿಯರು(ಪ್ರಥಮ ಸ್ಥಾನ), ಥ್ರೋಬಾಲ್‌ನಲ್ಲಿ ಬಾಲಕರು(ಪ್ರಥಮ), ರಿಲೇ ಹಾಗೂ ಎತ್ತರ ಜಿಗಿತದಲ್ಲಿ ಬಾಲಕಿಯರು(ದ್ವಿ) ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳನ್ನು ಮುಖ್ಯ ಶಿಕ್ಷಕಿ ಸಿಸ್ಟರ್ ಪಿ.ಜೆ.ಬ್ರಿಜಿತ್ ಅಭಿನಂದಿಸಿ ನಂತರ ಮಾತನಾಡಿ, ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಾಧನೆ ಮಾಡಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಆರೋಗ್ಯ ಉತ್ತಮಪಡಿಸಿಕೊಳ್ಳಬಹುದು. ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬ ಮಾತಿನಂತೆ ಮಕ್ಕಳು ಓದಿಗೆ ಮಾತ್ರ ಅಂಟಿಕೊಳ್ಳದೆ ಚಿಕ್ಕಂದಿನಿಂದಲೇ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ಎಂದು ಸಲಹೆ ನೀಡಿದರು.
ಶಿಕ್ಷಕರಾದ ಎಂ.ಕುಮಾರ, ಸ್ವಾಮಿಗೌಡ, ಪ್ರಸನ್ನ ಕುಮಾರ್, ಸಂದೇಶ್, ಕಾಂತರಾಜು, ಭಾರ್ಗವಿ, ಪವಿತ್ರಾ, ಆಶಾ, ಮಣಿಮಿಸ್, ಸುಕನ್ಯಾ, ಪ್ರಸನ್ನಕುಮಾರ್ ಇತರರು ಇದ್ದರು.