ಸಿಎಂ-ಡಿಸಿಎಂಗೆ ಕಾದು ಕಾದು ಸುಸ್ತಾದ ವೈದ್ಯರು; 2 ಗಂಟೆ ತಡವಾಗಿ ಆರಂಭವಾದ ವೈದ್ಯರ ದಿನಾಚರಣೆ

siddaramaiah
Published on

ಬೆಂಗಳೂರು: ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ. ಆ ಪ್ರಯುಕ್ತ ರಾಜ್ಯ ಸರ್ಕಾರವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ವೈದ್ಯರ ದಿನಾಚರಣೆಯನ್ನು ಹಮ್ಮಿಕೊಂಡಿತ್ತು. ಆದರೆ ಇದರಲ್ಲಿ ಭಾಗಿಯಾಗಲು ಬಂದಿದ್ದ ವೈದ್ಯರು ಮುಖ್ಯಮಂತ್ರಿ-ಉಪ ಮುಖ್ಯಮಂತ್ರಿ ಅವರಿಗಾಗಿ ಕಾದು ಕಾದು ಸುಸ್ತಾಗುವಂತಾಗಿತ್ತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ಹಮ್ಮಿಕೊಂಡಿದ್ದು, ಅದಕ್ಕೆ ಹಲವಾರು ವೈದ್ಯರನ್ನು ಆಹ್ವಾನಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇದರಲ್ಲಿ ಭಾಗಿಯಾಗಿದ್ದಾರೆ.

ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಕುರಿತ ಸಿದ್ಧತಾ ಸಭೆಯಲ್ಲಿ ತೊಡಗಿಕೊಂಡಿದ್ದರಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂದುಕೊಂಡ ಸಮಯಕ್ಕೆ ಸರಿಯಾಗಿ ಆರಂಭವಾಗಿಲ್ಲ. ಐದು ಗಂಟೆಗೆ ಎಂದು ನಿಗದಿಯಾಗಿದ್ದ ಕಾರ್ಯಕ್ರಮ ಏಳು ಗಂಟೆಗೆ ಆರಂಭವಾಯಿತು. ಹೀಗಾಗಿ ಕಾರ್ಯಕ್ರಮಕ್ಕೆ ಬಂದಿದ್ದ ವೈದ್ಯರು ಕಾದು ಬಳಲುವಂತಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net