ಶಾರ್ಟ್ ಸರ್ಕ್ಯೂಟ್‌ನಿಂದ ಹಲವು ವಸ್ತುಗಳು ಭಸ್ಮ

Oplus_131072
ನಂಜನಗೂಡು ತಾಲೂಕು ಅಂಬಳೆ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುತ್ತಿರುವ ದೃಶ್ಯ.
Published on

ನಂಜನಗೂಡು: ತಾಲೂಕಿನ ಅಂಬಳೆ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಹಲವು ವಸ್ತುಗಳು ಭಸ್ಮವಾಗಿದೆ.

ಗ್ರಾಮದ ಹೊರವಲಯದ ನಂಜುಂಡ ಶೆಟ್ಟಿ ಎಂಬುವರ ಜಮೀನಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗಳ ನಡುವೆ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ರೈತರಿಗೆ ಸೇರಿದ ಹನಿ ನೀರಾವರಿ ಪೈಪ್, ಪಿವಿಸಿ ಪೈಪ್, ಕೇಬಲ್‌ಗಳು, ನೀರೆತ್ತುವ ಪ್ಯಾನೆಲ್ ಬೋರ್ಡ್ ಸೇರಿದಂತೆ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ.

ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮುಂದಿನ ಭಾಗಗಳಿಗೆ ಬೆಂಕಿ ತಗಲದಂತೆ ಕ್ರಮ ಕೈಗೊಂಡಿದ್ದಾರೆ. ರೈತರಿಗೆ ಸುಮಾರು 40 ಸಾವಿರ ರೂ. ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ. ವಿದ್ಯುತ್ ಇಲಾಖೆ ಲೈನ್‌ಮೆನ್‌ಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net