

Actress Car Crash ..ಮುಂಬೈ: ಜನಪ್ರಿಯ ಮರಾಠಿ ಮತ್ತು ಹಿಂದಿ ಚಲನಚಿತ್ರ ನಟಿ ಊರ್ಮಿಳಾ ಕೊಠಾರಿ ಕಾರು ಅಪಘಾತಕ್ಕೀಡಾಗಿದ್ದಾರೆ. ನಟಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಾರ್ಮಿಕನಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಮುಂಬೈನಲ್ಲಿ ನಡೆದಿದೆ.
ನಟಿ ಊರ್ಮಿಳಾ ಕೊಠಾರಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ದಿನಗೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ನಟಿ ಮತ್ತು ಆಕೆಯ ಕಾರು ಚಾಲಕ ಕೂಡ ಗಾಯಗೊಂಡಿದ್ದಾರೆ. ನಟಿ ಊರ್ಮಿಳಾ ಮತ್ತು ಅವರ ಕಾರು ಚಾಲಕ ಕೂಡ ಗಾಯಗೊಂಡಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ನಟಿಗೆ ಸಣ್ಣಪುಟ್ಟ ಗಾಯಗಳಾಗಿವೆ...
ಉರ್ಮಿಳಾ ಕೊಠಾರಿ ಅವರು ಗುರುವಾರ ತಡರಾತ್ರಿ ಸಿನಿಮಾ ಚಿತ್ರೀಕರಣದಿಂದ ಹಿಂತಿರುಗುತ್ತಿದ್ದಾಗ ಮುಂಬೈನ ಕಂಡಿವಲಿ ಪ್ರದೇಶದಲ್ಲಿ ಪಾಯಿಸರ್ ಮೆಟ್ರೋ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ.
ಸರಿಯಾದ ಸಮಯಕ್ಕೆ ಏರ್ ಬ್ಯಾಗ್ ಅಳವಡಿಸಿದ್ದರಿಂದ ನಟಿ ಹಾಗೂ ಆಕೆಯ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಮತಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾರು ಚಾಲಕನ ವಿರುದ್ಧ ದೂರು ದಾಖಲಿಸಿಕೊಂಡು ವಾಹನ ತಪಾಸಣೆ ನಡೆಸಲಾಗುತ್ತಿದೆ.